ನು2ಗ್ಗೇಹಳ್ಳಿ: ಹೋಬಳಿಯ ಹಾರೋ ಸೋಮನಹಳ್ಳಿ-ನಟೇಕೆರೆ ಗ್ರಾಮದ ಮಾರ್ಗ ಮಧ್ಯದಲ್ಲಿ ₹3 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ಇತ್ತೀಚೆಗೆ ಸೇತುವೆ ಉದ್ಘಾಟಿಸಿ ಮಾತನಾಡಿದರು. ನುಗ್ಗೇಹಳ್ಳಿ ಜಂಬೂರು ತಾವರೆಕೆರೆ ಚನ್ನನಕಟ್ಟೆ ಕೆರೆಗಳು ತುಂಬಿ ಕೋಡಿ ಬಿದ್ದ ನೀರು ಹಾರೋ ಸೋಮನಹಳ್ಳಿ ಕೆರೆಗೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಕೆರೆ ಕೋಡಿ ಮೇಲ್ಭಾಗದಲ್ಲಿ ರಸ್ತೆ ಸಂಪೂರ್ಣ ಮುಳುಗಡೆ ಆಗುತ್ತಿತ್ತು. ಇದರಿಂದ ರೈತರಿಗೆ ಹಾಗೂ ವಾಹನ ಸವಾರರಿಗೆ ಮಳೆಗಾಲದಲ್ಲಿ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣ ಮಾಡಲಾಗಿದೆ ಎಂದರು.

ಇದರ ಜೊತೆಗೆ ಹಾರೋ ಸೋಮನಹಳ್ಳಿ ಗ್ರಾಮದಿಂದ ಕಲ್ಕೆರೆ ಭಾಗದ ಸೊಪ್ಪಿನ ಹಳ್ಳಿ ಗ್ರಾಮದ ಬಳಿ ಕೂಡ ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಭಾಗದ ಮುಖ್ಯ ರಸ್ತೆಗಳ ಅಭಿವೃದ್ಧಿ, ಸಮುದಾಯ ಭವನ, ದೇವಾಲಯ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಗಮನ ಹರಿಸಲಾಗಿದೆ ಎಂದು ಬಾಲಕೃಷ್ಣ ಹೇಳಿದರು.

ತಾಲ್ಲೂಕಿನಲ್ಲೇ ಅತಿ ಹೆಚ್ಚು ವಿಸ್ತೀರ್ಣವುಳ್ಳ ಸೇತುವೆ ಆಗಿದೆ. ತೋಟಿ ನೀರಾವರಿ ಯೋಜನೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ಒದಗಿಸುವಂತೆ ಕಳೆದ ಅಧಿವೇಶನದಲ್ಲಿ ನೀರಾವರಿ ಸಚಿವರಿಗೆ ಮನವಿ ಮಾಡಿದ್ದು ಈ ಬಗ್ಗೆ ಸಚಿವರು ಸ್ಪಂದಿಸುವ ಭರವಸೆ ಇದೆ. ಯೋಜನೆ ಪೂರ್ಣಗೊಂಡರೆ ಈ ಭಾಗದ ಕೆರೆಗಳನ್ನು ತುಂಬಿಸಲು ಹೆಚ್ಚು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿ.ಎನ್. ಮಂಜುನಾಥ್, ಕುರುವಂಕ ಶಿವಸ್ವಾಮಿ, ಕೃಷಿ ಪತ್ತಿನ ಅಧ್ಯಕ್ಷ ಧರ್ಮರಾಜ್, ಮಾಜಿ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಮುಖಂಡರಾದ ಮಧು, ಜಯಕುಮಾರ್, ಜಯರಾಮ್ ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-36-619319928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.