ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ನಕಲಿ ಪಿಸ್ತೂಲ್ ಹಿಡಿದು ಬೈಕ್ ರೈಡ್: ಇಬ್ಬರು ವಶಕ್ಕೆ

Published 30 ಜೂನ್ 2023, 13:51 IST
Last Updated 30 ಜೂನ್ 2023, 13:51 IST
ಅಕ್ಷರ ಗಾತ್ರ

ಹಾಸನ: ನಕಲಿ ಪಿಸ್ತೂಲ್‌ ಹಿಡಿದು ಬೈಕ್‌ನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಸಂಚರಿಸಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿಗೆ ನಕಲಿ ಪಿಸ್ತೂಲ್ ಹಿಡಿದು ಬುಲೆಟ್‌ನಲ್ಲಿ ಸಂಚರಿಸಿದ ಇಬ್ಬರು ಯುವಕರು, ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ವಿಡಿಯೊ ಚಿತ್ರೀಕರಿಸಿ, ಈ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು.

ಕೈನಲ್ಲಿ ಪಿಸ್ತೂಲ್‌ ಹಿಡಿದು ಬೈಕ್ ರೈಡ್ ಮಾಡಿದ್ದ ಯುವಕರು, ಹೆಲ್ಮೆಟ್ ಧರಿಸದೇ ಸಂಚಾರ ಮಾಡಿದ್ದಾರೆ. ಈ ವಿಡಿಯೊ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದರಿಂದ, ಈ ವಿಡಿಯೊ ಆಧಾರದಲ್ಲಿ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ತೋರಿದ ಆರೋಪದಡಿ ಇಬ್ಬರ ಮೇಲೆ ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT