ಶುಕ್ರವಾರ, ಅಕ್ಟೋಬರ್ 2, 2020
24 °C
ಜಿಲ್ಲೆಯಲ್ಲಿ 137 ಜನರಿಗೆ ಕೊರೊನಾ ಸೋಂಕು

ಹಾಸನ: ಮತ್ತೆ ಇಬ್ಬರ ಸಾವು, 88 ಜನ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 137 ಜನರಿಗೆ ಕೋವಿಡ್‌-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2872ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.

ಉಸಿರಾಟದ ಸಮಸ್ಯೆ, ರಕ್ತದೊತ್ತಡ, ಮಧುಮೇಹ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬೇಲೂರು ತಾಲ್ಲೂಕಿನ 50 ವರ್ಷದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹೊಳೆನರಸೀಪುರ ತಾಲ್ಲೂಕಿನ 62 ವರ್ಷದ ವೃದ್ಧ  ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿತ್ತು.  ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಸೋಂಕಿನಿಂದ ಈವರೆಗೆ 75 ಜನರು ಮರಣ ಹೊಂದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ತಿಳಿಸಿದರು.

ಹಾಸನದ ಆರೋಗ್ಯ ಕೇಂದ್ರ ಮೂವರು ಸಹಾಯಕರಿಗೆ, ಕಂಟೈನ್‌ಮೆಂಟ್‌ ವಲಯದ ಸಂಪರ್ಕದಿಂದ ಚನ್ನರಾಯಪಟ್ಟಣದ ವ್ಯಕ್ತಿ, ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಪುರುಷ, ಉತ್ತರ ಪ್ರದೇಶದ ಪ್ರವಾಸ ಹಿನ್ನೆಲೆಯುಳ್ಳ ಅರಕಲಗೂಡು ತಾಲ್ಲೂಕಿನ ಯುವಕನಿಗೆ ಕೊರೊನಾ ಸೋಂಕು ತಗುಲಿದೆ. ಉಳಿದ ಪ್ರಕರಣಗಳಲ್ಲಿ ಬಹುತೇಕ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಕೋವಿಡ್‌ ದೃಢಪಟ್ಟಿದೆ.

ಹೊಸದಾಗಿ ಅರಕಲಗೂಡು ತಾಲ್ಲೂಕಿನ 21, ಅರಸೀಕೆರೆ 9, ಬೇಲೂರು 4, ಚನ್ನರಾಯಪಟ್ಟಣ 10, ಹಾಸನ 82, ಹೊಳೆನರಸೀಪುರ 7 ಹಾಗೂ ಸಕಲೇಶಪುರ ತಾಲ್ಲೂಕಿನ ಮೂವರಿಗೆ ಸೋಂಕು ತಗುಲಿದೆ. 88 ಜನ ಸೇರಿ ಈವರೆಗೆ 1190 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1607 ಸಕ್ರಿಯ ಪ್ರಕರಣಗಳಿದ್ದು, 39 ರೋಗಿಗಳನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು