ಗುರುವಾರ , ಆಗಸ್ಟ್ 11, 2022
23 °C

ಕ್ಯಾಂಟರ್–ಬೈಕ್ ಢಿಕ್ಕಿ: ಸವಾರರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಾಥಪುರ (ಕೊಣನೂರು): ಸಮೀಪದ ತಟ್ಟವಾಳು- ಕೂನನಕೊಪ್ಪಲು ನಡುವಿನ ಬೆಳವಾಡಿ ರಸ್ತೆಯಲ್ಲಿ ಹಾಲಿನ ವಾಹನ ಹಾಗೂ ಬೈಕ್ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಕಸಬಾ ಹೋಬಳಿ ಮರವಳಲು ಗ್ರಾಮದ ಹರೀಶ್ (32), ರಾಮನಾಥಪುರ ಹೋಬಳಿಯ ಗರುಡನಹಳ್ಳಿ ಗ್ರಾಮದ ನಟೇಶ್ (33) ಮೃತಪಟ್ಟವರು.

ಹರೀಶ್ ಮತ್ತು ನಟೇಶ್ ಬಸವಾಪಟ್ಟಣ ಕಡೆಯಿಂದ ಬೆಳವಾಡಿ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಹಾಲಿನ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ಹರೀಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತೀವ್ರ ಗಾಯಗೊಂಡ ನಟೇಶ್‌ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು