ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಸಂದರ್ಭದಲ್ಲಿ ಬಾಲ್ಯ ವಿವಾಹ ಹೆಚ್ಚಳ: ಜಿಲ್ಲಾಧಿಕಾರಿ ಆರ್. ಗಿರೀಶ್

Last Updated 25 ಆಗಸ್ಟ್ 2021, 14:13 IST
ಅಕ್ಷರ ಗಾತ್ರ

ಹಾಸನ: ಬಾಲ್ಯ ವಿವಾಹ ತಡೆಗಟ್ಟವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದ್ದು, ಸಂಬಂಧಪಟ್ಟ ಗ್ರಾಮ
ಪಂಚಾಯಿತಿ, ತಹಶೀಲ್ದಾರ್, ಮಕ್ಕಳ ರಕ್ಷಣಾ ಘಟಕ ಅಥವಾ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ
ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹಾಗೂ ಜಿಲ್ಲಾ ಮಕ್ಕಳ ಸಮಗ್ರ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಬುಧವಾರ ಮಕ್ಕಳ ಸಂರಕ್ಷಣೆ
ಕುರಿತ ಅರಿವು - ನೆರವು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿರುವುದರಿಂದ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಾಲ್ಯ ವಿವಾಹ ಪ್ರೋತ್ಸಾಹಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ
ವಿಧಿಸಲಾಗುತ್ತದೆ. ಹೆಚ್ಚು ಪ್ರಕರಣಗಳು ವರದಿಯಾಗಿರುವ ಗ್ರಾಮಗಳು ಹಾಗೂ ತಾಲ್ಲೂಕುಗಳಿಗೆ ಜಾಗೃತಿ
ವಾಹನ ಭೇಟಿ ನೀಡಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರವಿಕಾಂತ್ ಮಾತನಾಡಿ, ಬಾಲ್ಯ ವಿವಾಹ ಸಾಮಾಜಿಕ ಪಿಡುಗಾಗಿದ್ದು,
ಸಮಾಜಕ್ಕೆ ಮಾರಕವಾಗಿದೆ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸಾರ್ವಜನಿಕರು
ಎಚ್ಚರಿಕೆ ವಹಿಸಬೇಕು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ನಿಷೇಧವಾಗಬೇಕು
ಎಂದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳಿಗಾಗಿ ವಿಶೇಷ ನ್ಯಾಯಾಲಯ
ಸಹ ಇದೆ. ಈ ಕಾಯ್ದೆ ಕಠಿಣವಾಗಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು
ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪರ್ದೇಶಕ
ಪರುಶುರಾಮ್ ಶೆಟಪ್ಪನವರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಷಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ
ಕೋಮಲಾ, ಸದಸ್ಯೆ ವಿ. ಗೀತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT