ಹಾಸನ: ಬಾಲಕರ ಹಾಸ್ಟೆಲ್ ನಲ್ಲಿ ಉದುರಿ ಬಿದ್ದ ಚಾವಣಿ ಪದರ

ಹಾಸನ: ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ನಲ್ಲಿ ಚಾವಣಿ ಪದರ ಉದುರಿ ಬಿದ್ದಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸ್ಟೆಲ್ನಲ್ಲಿ 200 ವಿದ್ಯಾರ್ಥಿಗಳು ವಾಸ್ತವ್ಯ ಮಾಡಿದ್ದು, ಕಳೆದ ರಾತ್ರಿ ಮಲಗಿದ್ದ ವೇಳೆ ಕೊಠಡಿ ಚಾವಣಿಯ ಪದರ ಬೀಳಲು ಆರಂಭಿಸಿದೆ. ಶಬ್ದ ಕೇಳಿ ಎಚ್ಚರಗೊಂಡ ವಿದ್ಯಾರ್ಥಿಗಳು ಕೊಠಡಿಯಿಂದ ಹೊರಗೆ ಬಂದಿದ್ದಾರೆ.
‘ಕಟ್ಟಡ ಶಿಥಿಲಗೊಂಡು ಪದರ ಉದುರಿ ಬೀಳುತ್ತಿದ್ದರೂ ದುರಸ್ತಿಗೆ ಮುಂದಾಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಜೀವ ಕೈಯಲ್ಲಿ ಹಿಡಿದು ವಾಸ್ತವ್ಯ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಹಾಸ್ಟೆಲ್ ಗೋಡೆಗಳು ಕುಸಿದು ಬೀಳುತ್ತವೆ ಎಂಬ ಆತಂಕ ಕಾಡುತ್ತಿದೆ’ ಎಂದು ವಿದ್ಯಾರ್ಥಿಗಳು ಅಲವತ್ತುಕೊಂಡರು.
‘ಅನಾಹುತ ಸಂಭವಿಸುವ ಮುನ್ನ ಹಾಸ್ಟೆಲ್ ಕಟ್ಟಡ ದುರಸ್ತಿಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.