ಬೇಲೂರು ದೇಗುಲ ಇಒ ಆಗಿ ಉಮಾ ಅಧಿಕಾರ ಸ್ವೀಕಾರ

ಬೇಲೂರು: ಇಲ್ಲಿನ ಚನ್ನಕೇಶವ ಸ್ವಾಮಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಯಾಗಿ ಉಮಾ ಅವರು ಅಧಿಕಾರ ವಹಿಸಿಕೊಂಡರು.
ಈವರೆಗೆ ಕಾರ್ಯನಿರ್ವಹಿಸುತ್ತಿದ್ದ ವಿಧ್ಯುಲ್ಲತಾ ಅವರಿಗೆ ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಅವರು ಉಮಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿದ ಉಮಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಬಡ್ತಿ ನೀಡಿ ಈ ದೇಗುಲಕ್ಕೆ ವರ್ಗಾವಣೆ ಮಾಡಿದೆ. ಬೇಲೂರು ವಿಶ್ವ ವಿಖ್ಯಾತ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಹಾಗೂ ಭಕ್ತರು ಹೆಚ್ಚು ಬರುತ್ತಾರೆ. ಭಕ್ತರ ಅನುಕೂಲಕ್ಕೆ ತಕ್ಕಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿ, ದೇಗುಲದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದರು.
ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ, ಸಂಪತ್, ಲಕ್ಷ್ಮಣ್ ಹಾಗೂ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.