ಅರಸೀಕೆರೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಮಂಗಳವಾರ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠಕ್ಕೆ ಭೇಟಿ ನೀಡಿ ಕೋಡಿ ಶ್ರೀಗಳ ಆಶೀರ್ವಾದ ಪಡೆದರು.

ಮಠಕ್ಕೆ ಬಂದ ಶಾಸಕರನ್ನು ಮಠದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡಿತು. ಬಳಿಕ ಶಾಸಕ ಮೇಟಿ ಅವರು ಮಠದ ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮಜ್ಜಯ್ಯ ಅವರ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ನಮನ ಸಲ್ಲಿಸಿದರು.

ಕೋಡಿಮಠದ ಪೀಠಾಧಿಪತಿ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ರಜತ ಕಿರೀಟ ಧಾರಣೆ ಮಾಡಿ, ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ಶಾಸಕರಿಗೆ ಶಾಲು ಹೊದಿಸಿ, ಫಲ ಮಂತ್ರಾಕ್ಷತೆ ನೀಡಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ‘ಕೋಡಿ ಶ್ರೀಗಳ ಆಶೀರ್ವಾದದಿಂದಲೇ ಉಪ ಚುನಾವಣೆಯಲ್ಲಿ ಜಯ ಗಳಿಸಲು ಸಾಧ್ಯವಾಯಿತು. ಕ್ಷೇತ್ರದ ಜನತೆಯ ಸೇವೆಗೆ ಶ್ರೀಗಳ ಮಾರ್ಗದರ್ಶನದಲ್ಲಿ ಸದಾ ಬದ್ಧನಾಗಿರುತ್ತೇನೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-2076457816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.