ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾಸನ: ಮುಗಿಯದ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಅನುದಾನ ಬಿಡುಗಡೆಗೆ ಕೇಂದ್ರ–ರಾಜ್ಯ ಸರ್ಕಾರಗಳ ಉದಾಸೀನ
Published : 18 ಜುಲೈ 2024, 7:08 IST
Last Updated : 18 ಜುಲೈ 2024, 7:08 IST
ಫಾಲೋ ಮಾಡಿ
Comments
ಹಾಸನದ ಚನ್ನಪಟ್ಟಣ ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನಗಳ ಓಡಾಟ ಆರಂಭವಾಗಿವೆ. 
ಹಾಸನದ ಚನ್ನಪಟ್ಟಣ ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನಗಳ ಓಡಾಟ ಆರಂಭವಾಗಿವೆ. 
ಕೇಂದ್ರ ಸಚಿವ ಸೋಮಣ್ಣ ಇಂದು ನಗರಕ್ಕೆ
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಜು.18 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೈರುತ್ಯ ರೈಲು ಮತ್ತು ನಿರ್ಮಾಣ ಸಂಸ್ಥೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದು ಹಾಸನ -ಬೇಲೂರು ಹೊಸ ರೈಲು ಮಾರ್ಗದ ಪ್ರಗತಿ ಪರಿಶೀಲನೆಯ ನಡೆಸಲಿದ್ದಾರೆ. ನಂತರ ಎನ್.ಅರ್. ವೃತ್ತದ ಬಳಿಯ ನಿರ್ಮಾಣವಾಗುತ್ತಿರುವ ರಸ್ತೆ ಮೇಲ್ಸೇತುವೆ ಮತ್ತು ಹಾಸನ ರೈಲ್ವೆ ನಿಲ್ದಾಣದ ಪರಿಶೀಲನೆ ನಡೆಸಲಿದ್ದಾರೆ. ಎಂದು ನೈರುತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ ಕಲಗೊಂಡ ಮಾಹಿತಿ ನೀಡಿದ್ದಾರೆ.
ಸಚಿವರಿಗೆ ಪತ್ರ ಬರೆದಿದ್ದೆ: ರಾಜಣ್ಣ
ಹಾಸನದಲ್ಲಿ 6 ತಿಂಗಳಿನಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಕೆಲಸ ಸ್ಥಗಿತಗೊಂಡಿದ್ದು ಈ ಸಂಬಂಧ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದೆ. ಅದರಂತೆ ಜುಲೈ 18 ರಂದು ಸಚಿವ ವಿ.ಸೋಮಣ್ಣ ಹಾಸನಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದ್ದಾರೆ. ಹಾಸನ ಜಿಲ್ಲೆಗೆ ಭೇಟಿ ನೀಡಿ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವುದರ ಜೊತೆಗೆ ಕಾಮಗಾರಿಯ ಸ್ಥಳ ಪರಿಶೀಲನೆ ಮಾಡಬೇಕು. ಈ ಸಂಬಂಧ ದಿನಾಂಕ ನಿಗದಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಪತ್ರದಲ್ಲಿ ಕೋರಲಾಗಿತ್ತು. ಅದಕ್ಕೆ ಅನುಗುಣವಾಗಿ ಸಚಿವ ಸೋಮಣ್ಣ ಜು.18 ರಂದು ಪ್ರಗತಿ ಪರಿಶೀಲನೆ ಸಭೆ ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT