ಹಾಸನ: ಜಿಲ್ಲೆಯಾದ್ಯಂತ ನಗರ, ಪಟ್ಟಣ, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಲು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳೊಂದಿಗೆ ಸಹಕಾರ ನೀಡುವ ಮೂಲಕ ರಸ್ತೆಯ ಅಕ್ಕಪಕ್ಕ ಎಲ್ಲೆಂದರಲ್ಲಿ ತ್ಯಾಜ್ಯ ವಸ್ತುಗಳನ್ನು ಎಸೆಯದೇ ನಿಗದಿತ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಬೇಕು. ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಖಾಲಿ ಪ್ರದೇಶ, ಖಾಲಿ ನಿವೇಶನಗಳಲ್ಲಿ ಅನವಶ್ಯಕವಾಗಿ ಗಿಡಗಂಟಿಗಳು ಬೆಳೆಯದಂತೆ ನಿವೇಶನದ ಮಾಲೀಕರುಗಳು ನಿವೇಶನಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಸಾರ್ವಜನಿಕರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ ವಾಹನ ನಿಲುಗಡೆಗೆ ಕಾಯ್ದಿರಿಸಿರುವ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು. ನಗರಗಳ ಸ್ವಚ್ಚತೆಗೆ ಜಿಲ್ಲಾಡಳಿತವು ಕೈಗೊಳ್ಳುವ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಜೀವನವನ್ನು ಉತ್ತಮಪಡಿಸಲು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಿ, ಪಟ್ಟಣಗಳನ್ನು ಸ್ವಚ್ಛವಾಗಿ ಇಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ನೀರಿನ ಮೂಲಗಳ ಸಂರಕ್ಷಣೆ, ಸ್ಥಳೀಯ ಸಂಸ್ಥೆಗಳ ಆಸ್ತಿ ಸಂರಕ್ಷಣೆ, ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ನಿರ್ವಹಣೆ, ಮಳೆ ನೀರು ಚರಂಡಿಗಳ ನಿರ್ವಹಣೆ, ಬೀದಿ ನಾಯಿಗಳ ನಿಯಂತ್ರಣ, ಸಾರ್ವಜನಿಕ ಶೌಚಾಲಯ ಹಾಗೂ ನೈರ್ಮಲ್ಯ ನಿರ್ವಹಣೆ, ಆಸ್ತಿ ತೆರಿಗೆ ವಸೂಲಾತಿ, ಕುಡಿಯುವ ನೀರು ಸರಬರಾಜು, ವಾಹನ ನಿಲುಗಡೆ ಸಂಚಾರ ವ್ಯವಸ್ಥೆ, ಕಸಾಯಿಖಾನೆ ಹಾಗೂ ಸಂತೆ ಸ್ಥಳ ನಿರ್ವಹಣೆ, ಕಟ್ಟಡ ನಿರ್ಮಾಣ ನಿಯಂತ್ರಣ ಹಾಗೂ ಖಾಸಗಿ ನಿವೇಶನಗಳ ನಿರ್ವಹಣೆ, ಪಾಟ್ಹೋಲ್ ಹಾಗೂ ರಸ್ತೆ ಕಟ್ಟಿಂಗ್ ನಿರ್ವಹಣೆ, ಇ-ಖಾತೆ ನಿರ್ವಹಣೆ ಹಾಗೂ ನಿರ್ದಿಷ್ಟ ಪ್ರದೇಶಗಳ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈಗಾಗಲೇ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಸಾಕಷ್ಟು ಕ್ರಮವನ್ನು ಕೈಗೊಳ್ಳಲಾಗಿದ್ದು, ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ, ಕುಡಿಯುವ ನೀರಿನ ಸರಬರಾಜಿನ ಪೈಪ್ಲೈನ್ಗಳಲ್ಲಿ ಚರಂಡಿ, ಒಳಚರಂಡಿ, ಮಳೆ ನೀರು ಚರಂಡಿ ಹಾಗೂ ಇತರೆ ಯಾವುದೇ ಕಲುಷಿತ ನೀರು ಸೇರದಂತೆ ಆಗ್ಗಿಂದಾಗ್ಗೆ ಪರಿಶೀಲಿಸಿ, ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜಿನ ಪೈಪ್ಲೈನ್ಗಳಲ್ಲಿ ಚರಂಡಿ, ಒಳಚರಂಡಿ, ಮಳೆ ನೀರು ಚರಂಡಿಯ ಹಾಗೂ ಇತರೆ ಯಾವುದೇ ಕಲುಷಿತ ನೀರು ಸೇರುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ತಕ್ಷಣ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಹಾಸನ ಇವರಿಗೆ ಹಾಗೂ ಸ್ಥಳೀಯ ಸಂಸ್ಥೆಯ ಆಯುಕ್ತರು, ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿ ಗಮನಕ್ಕೆ ಸಾರ್ವಜನಿಕರು ತರುವಂತೆ ತಿಳಿಸಿದ್ದಾರೆ.