ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | ಮೊಬೈಲ್‌ ಫೋನ್‌ ಬಳಕೆ: ಚೆಕ್‌ಪೋಸ್ಟ್‌ ಸಿಬ್ಬಂದಿಗೆ ನೋಟಿಸ್‌

Published 21 ಮಾರ್ಚ್ 2024, 12:20 IST
Last Updated 21 ಮಾರ್ಚ್ 2024, 12:20 IST
ಅಕ್ಷರ ಗಾತ್ರ

ಹಾಸನ: ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ ಸಿಬ್ಬಂದಿ ವಾಹನ ತಪಾಸಣೆ ಮಾಡುವ ಬದಲು ಮೊಬೈಲ್‌ ಫೋನ್‌ನಲ್ಲಿ ನಿರತರಾಗಿದ್ದನ್ನು ಕಂಡ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಎಂಟು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಚನ್ನರಾಯಪಟ್ಟಣ, ಅರಕಲಗೂಡು ತಾಲ್ಲೂಕಿನ ಗಡಿ ಭಾಗಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ, ಕೆಲ ಹೊತ್ತು ದೂರದಲ್ಲಿ ನಿಂತು ಚೆಕ್‌ಪೋಸ್ಟ್‌ ಸಿಬ್ಬಂದಿ ಕಾರ್ಯವೈಖರಿ ವೀಕ್ಷಿಸಿದರು. ಈ ವೇಲೆ ಕೆಲ ಸಿಬ್ಬಂದಿ, ವಾಹನ ತಪಾಸಣೆ ಬದಲಾಗಿ ಮೊಬೈಲ್ ನೋಡುತ್ತ ಕುಳಿತಿದ್ದನ್ನು ಗಮನಿಸಿದರು.

ಬಹುತೇಕ ವಾಹನಗಳನ್ನು ತಪಾಸಣೆ ಮಾಡದೇ ಬಿಡುತ್ತಿರುವುದನ್ನು ನೋಡಿದ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ತಕ್ಷಣವೇ ನೋಟಿಸ್ ಜಾರಿ ಮಾಡಿದ್ದಾರೆ. ಮುಂದೆ ಈ ರೀತಿ ತಪ್ಪುಗಳು ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ .

ಜಿಲ್ಲೆಯ ಗಡಿ ಭಾಗಗಳು ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ 22 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರು ಚೆಕ್ ಪೋಸ್ಟ್‌ ತೆರೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT