ಸೋಮವಾರ, ಜೂನ್ 27, 2022
21 °C

ವಲಸೆ ಕಾರ್ಮಿಕರಿಗೆ ಲಸಿಕೆ: ಜಿಲ್ಲಾ ನ್ಯಾಯಾಧೀಶ ಶಿವಣ್ಣ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆಯುವುದರಿಂದ ಕೋವಿಡ್ ತಡೆಗಟ್ಟಬಹುದು ಎಂದು ಜಿಲ್ಲಾ ನ್ಯಾಯಾಧೀಶ ಶಿವಣ್ಣ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಗರದ ಗಂಧದಕೋಠಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯ ನೀರಿನ ಟ್ಯಾಂಕ್ ಬಳಿ ಬಿಎಸ್ಆರ್ ಕಂಪನಿ ಕಚೇರಿಯಲ್ಲಿ ಸೋಮವಾರ ಅಸಂಘಟಿತ ವಲಸೆ ಕಾರ್ಮಿಕರಿಗೆ ಕೋವಿಡ್ ನಿಯಂತ್ರಣಕ್ಕಾಗಿ ಲಸಿಕೆ
ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಲಸಿಕೆ ಪಡೆದವರು ಸಹ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಎಚ್ಚರಿಕೆ ವಹಿಸಬೇಕು. ಸೋಂಕು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಿಸುವಲ್ಲಿ ಉತ್ತಮ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

ಸಿವಿಲ್ ಸೆಷನ್ಸ್‌ ನ್ಯಾಯಾಧೀಶ ರವಿಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್‍, ಕಾರ್ಮಿಕ ಅಧಿಕಾರಿ ರಾಮಕೃಷ್ಣ, ತಾಲ್ಲೂಕು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು