ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲಗೂಡು: ಸಂಭ್ರಮದ ವರಮಹಾಲಕ್ಷ್ಮಿ ಹಬ್ಬದ ಆಚರಣೆ

Published 25 ಆಗಸ್ಟ್ 2023, 13:04 IST
Last Updated 25 ಆಗಸ್ಟ್ 2023, 13:04 IST
ಅಕ್ಷರ ಗಾತ್ರ

ಅರಕಲಗೂಡು: ಪಟ್ಟಣದಲ್ಲಿ ಶುಕ್ರವಾರ ವರಲಕ್ಷ್ಮಿ ಹಬ್ಬವನ್ನು ಜನರು ಶ್ರದ್ದಾ ಭಕ್ತಿಯಿಂದ ಆಚರಿಸಿದರು.

ಮನೆಯಲ್ಲಿ ಅಲಂಕರಿಸಿದ ಮಂಟಪದಲ್ಲಿ ಲಕ್ಷ್ಮಿಕಲಶವನ್ನು ಪ್ರತಿಷ್ಠಾಪಿಸಿ ವಿವಿಧ ಬಗೆಯ ಹೂ, ಹಣ್ಣು, ನೈವೇದ್ಯಗಳನ್ನು ಇಟ್ಟು ಪೂಜೆ ಸಲ್ಲಿಸಿ ಧನ, ಧಾನ್ಯ ಸಿರಿ ಸಂಪತ್ತನ್ನು ನೀಡುವಂತೆ ಪ್ರಾರ್ಥಿಸಿದರು. ಮಹಿಳೆಯರು ಲಕ್ಷ್ಮಿದೇವಿಗೆ ಅರತಿ ಬೆಳಗಿ ಸ್ನೇಹಿತರು, ಬಂಧುಗಳಿಗೆ ಬಾಗಿನ ನೀಡಿದರು.

ವರಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದಲ್ಲಿ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಜನರು ದರ್ಶನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT