ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ: ಜಿಲ್ಲೆಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ

Published 25 ಆಗಸ್ಟ್ 2023, 13:20 IST
Last Updated 25 ಆಗಸ್ಟ್ 2023, 13:20 IST
ಅಕ್ಷರ ಗಾತ್ರ

ಹಾಸನ: ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮಿ ಪೂಜೆಯನ್ನು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಶ್ರದ್ಧೆ, ಭಕ್ತಿಯಿಂದ ಪೂಜೆ ನೆರವೇರಿಸಿದರು.

ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಹಬ್ಬಕ್ಕೆ ಮುಂಚಿತವಾಗಿಯೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಮನೆಗಳಲ್ಲಿ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿದರು. ಹಬ್ಬದ ಪ್ರಯುಕ್ತ ಕೆಲವರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.

ನಗರದ ರಿಂಗ್ ರಸ್ತೆಯ ಚಾಮುಂಡೇಶ್ವರಿ ದೇವಾಲಯ, ಕೆ.ಆರ್.ಪುರಂ ಈಶ್ವರ ಹಾಗೂ ಗಣಪತಿ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ದೇವರಿಗೆ ವಿಶೇಷ ಅಲಂಕಾರ ಮಾಡಿ, ರುದ್ರಾಭಿಷೇಕ, ವಿಶೇಷ ಹೂವಿನ ಅಲಂಕಾರ, ಕುಂಕುಮ ಆರ್ಚನೆ ನರೆವೇರಿಸಲಾಯಿತು.

ಹಬ್ಬ ಆಚರಣೆಗಾಗಿ ಮಹಿಳೆಯರು ಬೆಳಿಗ್ಗೆಯಿಂದಲೇ ದೇವಿಯನ್ನು ಪ್ರತಿಷ್ಠಾಪಿಸಿ,  ಹೂವು, ಹಣ್ಣು, ಆಭರಣಗಳಿಂದ ಅಲಂಕರಿಸಿ, ಹೊಸ ಉಡುಪುಗಳಿಂದ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಮಹಿಳೆಯರು ಹಾಗೂ ಮಕ್ಕಳು ಹೊಸ ಉಡುಪುಗಳನ್ನು ತೊಟ್ಟು ,ಮನೆಯಲ್ಲಿ ಸುಖ-ಶಾಂತಿ-ನೆಮ್ಮದಿ ಹಾಗೂ ಸಕಲ ಐಶ್ವರ್ಯ ನೆಲೆಸುವಂತೆ ವರ ಮಹಾಲಕ್ಷ್ಮಿಯನ್ನು ಪ್ರಾರ್ಥಿಸಿದರು. ವರಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿದ ಮಹಿಳೆಯರು, ಸುಮಂಗಲಿಯರಿಗೆ ಅರಿಶಿಣ-ಕುಂಕುಮ, ಕಣವನ್ನು ನೀಡಿ ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT