ಹೆತ್ತೂರು: ಯಸಳೂರು ಹೋಬಳಿಯ ಚಂಗಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಗ್ರಾಮ ಸಭೆಗೆ ಕೇವಲ ಮೂರು ಇಲಾಖೆಯ ಅಧಿಕಾರಿಗಳು ಮಾತ್ರ ಹಾಜರಾಗಿದ್ದು, ಗ್ರಾಮಸ್ಥರ ಸಮಸ್ಯೆ ಕೇಳಲು ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಗ್ರಾಮ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ್ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ಆಯೋಜಿಸಿದ್ದು, ತಾಲ್ಲೂಕು ಆಡಳಿತದ 37 ಇಲಾಖೆಗೆ ಮಾಹಿತಿ ಕೊಡಲಾಗಿತ್ತು. ಆದರೆ ಕೇವಲ ಮೂರು ಇಲಾಖೆಯವರು ಮಾತ್ರ ಹಾಜರಿದ್ದರು. ಇದನ್ನು ಕಂಡ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಸಭೆ ಬಹಿಷ್ಕರಿಸಿ, ಹಾಜರಾಗದ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು.

ಗ್ರಾಮ ಸಭೆ ಆರಂಭವಾಗುತ್ತಿದ್ದಂತೆ ಕಾಮನಹಳ್ಳಿ ಗ್ರಾಮದ ಸದಸ್ಯ ಪ್ರೀತಮ್ ಮಾತನಾಡಿ, ಸಭೆಗೆ ಬಹುತೇಕ ಅಧಿಕಾರಿಗಳು ಹಾಜರಾಗಿಲ್ಲ. ಗ್ರಾಮಸ್ಥರ ಸಮಸ್ಯೆ ಯಾರಿಗೆ ಹೇಳುವುದು? ಯಾರಿಂದ ಮಾಹಿತಿ ಪಡೆದುಕೊಳ್ಳುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಸವಿನ್ ಗೌಡ, ‘ಈಗಾಗಲೇ ಗ್ರಾಮ ಪಂಚಾಯಿತಿಯಲ್ಲಿ ಕೆಲವು ಹಗರಣಗಳು ಆಗಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ಹೆಚ್ಚಿನ ಇಲಾಖೆಯವರು ಸಭೆಗೆ ಹಾಜರಾಗಬೇಕು. ಅವರಿಂದ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಸಿಗಬೇಕು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಬರಬೇಕು. ಇಲ್ಲವಾದರೆ ಗ್ರಾಮಸಭೆ ನಡೆಸಲು ಬಿಡುವುದಿಲ್ಲ’ ಎಂದು ಪಟ್ಟು ಹಿಡಿದರು.

ಗ್ರಾಮ ಪಂಚಾಯಿತಿಯ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಕಾಮಗಾರಿ ನಡೆದಿದ್ದರೂ, ಗ್ರಾಮಸ್ಥರಿಗೆ ಕುಡಿಯುವ ನೀರಿನ ಭಾಗ್ಯ ಸಿಕ್ಕಿಲ್ಲ. ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಹಕ್ಕು ಪತ್ರಗಳನ್ನು ಇದುವರೆಗೂ ಫಲಾನುಭವಿಗಳಿಗೆ ನೀಡಲು ಕಂದಾಯ ಇಲಾಖೆಯವರು ಮನಸ್ಸು ಮಾಡಿಲ್ಲ. ಸರಿಯಾಗಿ ಜೆಜೆಎಂ ಕಾಮಗಾರಿ ನಡೆದಿಲ್ಲ ಎಂದು ಗ್ರಾಮಸ್ಥರು ದೂರಿದರು.

ಈ ಮಧ್ಯೆ ಗ್ರಾಮಸಭೆಗೆ ಬಂದಿದ್ದ ಗ್ರಾಮಸ್ಥರು ಒಗ್ಗಟ್ಟಿನಿಂದ ಸಭೆ ಬಹಿಷ್ಕರಿಸಿ ಸಭೆಯಿಂದ ಹೊರ ನಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.