ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ಮೇಲಿನ ದೌರ್ಜನ್ಯ: ತನಿಖೆಗೆ ಆಗ್ರಹ

ಹೇಮಾವತಿ ಪ್ರತಿಮೆ ಎದುರು ಪಿಎಫ್‌ಐ ಪ್ರತಿಭಟನೆ
Last Updated 15 ಏಪ್ರಿಲ್ 2022, 15:17 IST
ಅಕ್ಷರ ಗಾತ್ರ

ಹಾಸನ: ‘ರಾಮನವಮಿ ರ್‍ಯಾಲಿ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತುಮುಸ್ಲಿಮರ ಮೇಲಿನ ಪೊಲೀಸ್ ದೌರ್ಜನ್ಯದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್‌ನ ನಿವೃತ್ತ ಅಥವಾ ಹಾಲಿ ನ್ಯಾಯಮೂರ್ತಿ ನೇತೃತ್ವದ ಆಯೋಗರಚಿಸಬೇಕು’ ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾದಿಂದ (ಪಿಎಫ್‌ಐ) ಹೇಮಾವತಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆನಡೆಸಲಾಯಿತು.

‘ರಾಮನವಮಿ ಯಾತ್ರೆ ವೇಳೆ ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಗಳು ಸಂಘಟಿತ ಪ್ರಯತ್ನದ ಭಾಗಗಳಾಗಿವೆ. ಬಲಪಂಥೀಯ ಗೂಂಡಾಗಳ ವಿರುದ್ಧ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಹಿಂದೂ ಧಾರ್ಮಿಕ ಕಾರ್ಯಕ್ರಮಗಳನ್ನು ದ್ವೇಷ ಮತ್ತು ಹಿಂಸಾಚಾರಪ್ರಚೋದನೆಗೆ ದುರ್ಬಳಕೆ ಮಾಡಲಾಗುತ್ತಿದೆ. ಅಧಿಕಾರಿಗಳು ಮತ್ತು ಪೊಲೀಸರುಹಿಂಸಾಚಾರ ತಡೆಯಲು ಕ್ರಮ ಕೈಗೊಳ್ಳುತ್ತಿಲ್ಲ. ಅದಕ್ಕೆ ಬದಲಾಗಿ ಒಂದು ಗುಂಪಿಗೆ ನೆರವು ಮತ್ತು ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ದೂರಿದರು.

ಪ್ರತಿಭಟನೆಯಲ್ಲಿ ಪಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಮಹಮದ್ ಯಾಸೀನ್, ಸಯ್ಯದ್ ಫಾರೀದ್, ಮುಖಂಡರಾದ ಸಯ್ಯದ್ ನದೀಮ್, ಫೈರೋಜ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT