ಭಾನುವಾರ, ಆಗಸ್ಟ್ 14, 2022
24 °C
ಶಾಸಕ ಪ್ರೀತಂ ಜೆ.ಗೌಡ ಹೇಳಿಕೆ

ವಿಶ್ವನಾಥ್ ಹೊಸಬರು, ಪಕ್ಷದ ಸಿದ್ದಾಂತ ಗೊತ್ತಿಲ್ಲ: ಶಾಸಕ ಪ್ರೀತಂ ಜೆ.ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ವಿಧಾನ ಪರಿಷತ್‌ ಸದಸ್ಯ ಎಚ್‍.ವಿಶ್ವನಾಥ್‌ ಬಿಜೆಪಿಗೆ ಹೊಸಬರಿದ್ದಾರೆ. ಅವರಿಗೆ ಪಕ್ಷದ ಸಿದ್ದಾಂತ, ವಿಚಾರ ತಿಳಿದುಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರಾದ ವಿಶ್ವನಾಥ್‌ ಅನುಭವಗಳನ್ನು ಬಳಸಿಕೊಳ್ಳುತ್ತೇವೆ. ಆದರೆ, ಪಕ್ಷದ ಸಿದ್ಧಾಂತ ಹಾಗೂ ವಿಚಾರಗಳನ್ನು ಹಿರಿಯರು ಮತ್ತು ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ. ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ಸಿದ್ಧಾಂತ, ಅದಕ್ಕೆ ವಿಶ್ವನಾಥ್‍ ಒಳಗೊಂಡಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.

ರಾಜ್ಯ ಉಸ್ತುವಾರಿ ಅರುಣ್‍ ಸಿಂಗ್ ಅವರು ಜಿಲ್ಲೆಯಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬಹುದು ಎಂಬುದರ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಅವರು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಅದಕ್ಕೆ ಸಹಮತ ವ್ಯಕ್ತಪಡಿಸುವುದು ಪಕ್ಷದ ಶಾಸಕನಾಗಿ ನನ್ನ ಕರ್ತವ್ಯ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು