ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ: ತನಿಖೆಗೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ
Last Updated 10 ಜುಲೈ 2019, 14:49 IST
ಅಕ್ಷರ ಗಾತ್ರ

ಹಾಸನ: ‘ಕುಲಪತಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ವಿಶ್ವವಿದ್ಯಾಲಯಗಳು ಭ್ರಷ್ಟಾಚಾರ ಎಸಗಿವೆ’ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‌‘ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಗುಣಮಟ್ಟ ದಿನಂದಿಂದ ದಿನಕ್ಕೆ ಕುಸಿಯುತ್ತಿದೆ. ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ವಿ.ವಿ ಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಜ್ಞಾನ ಸರ್ವರಿಗೂ ಸಿಗುವಂತಾಗಬೇಕು. ಆದರೆ ಹಲವು ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಯೇ ಆಗಿಲ್ಲ. ಇದರಿಂದ ಹಲವು ವಿವಿ ಗಳ ಶೈಕ್ಷಣಿಕ ವಾತಾವರಣವೇ ಹಾಳಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕವಾಗಿಲ್ಲ. 6 ಸಾವಿರಕ್ಕೂ ಹೆಚ್ಚು ಹುದ್ದೆಗಳು ಭರ್ತಿಯಾಗಬೇಕು. ಉನ್ನತ ಶಿಕ್ಷಣದ ಉಳಿವು ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ಕೂಡಲೇ ಖಾಲಿ ಹುದ್ದೆ ಭರ್ತಿ ಮಾಡಬೇಕು. ಅಲ್ಲದೇ ರಾಜ್ಯದಲ್ಲಿ ಹಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗ್ರೇಡ್-01 ಪ್ರಾಂಶುಪಾಲರ ಹುದ್ದೆಯೂ ಭರ್ತಿಯಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಉನ್ನತ ಶಿಕ್ಷಣದ ಕೇಂದ್ರವಾಗಬೇಕಾದ ವಿಶ್ವವಿದ್ಯಾಲಯಗಳು ಇಂದು ಭ್ರಷ್ಟಚಾರದ ಕೇಂದ್ರಗಳಾಗುತ್ತಿವೆ. ಕಟ್ಟಡ ಕಾಮಗಾರಿ, ಪ್ರಯೋಗಾಲಯ ಅಭಿವೃದ್ಧಿ, ಉಪಕರಣಗಳ ಖರೀದಿ, ಅಂಕ ಪಟ್ಟಿ, ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ. ಈ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು' ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ನಗರ ಕಾರ್ಯದರ್ಶಿ ಕಂದನ್ ಕುಮಾರ್, ವಿದ್ಯಾರ್ಥಿಗಳಾದ ಚೇತನ್, ಮನೋಜ್, ದರ್ಶನ್, ಸುಮಂತ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT