ಹಾಸನ: ಮಲೆನಾಡು ಭಾಗದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಸಕಲೇಶಪುರ, ಹೆತ್ತೂರು, ಕಸಬಾ ಹೋಬಳಿ ಸತ್ತಿಗಾಲ್ ಗ್ರಾಮದ ಭತ್ತದ ಗದ್ದೆ ಜಲಾವೃತಗೊಂಡಿದ್ದು, ಜಮೀನಿನಲ್ಲಿ ನೀರು ನಿಂತು ಕೃಷಿ ಚಟುವಟಿಕೆಗೆ ಅಡ್ಡಿ ಉಂಟಾಗಿದೆ. ಕಾಫಿ, ಮೆಣಸು, ಅಡಿಕೆ, ಭತ್ತದ ಬೆಳೆಗಳಿಗೆ ಹಾನಿಯುಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಹೊಳೆ ತುಂಬಿ ಹರಿಯುತ್ತಿದ್ದು, ಹಳ್ಳಕೊಳ್ಳಗಳು ಮೈತುಂಬಿವೆ. ಶೀತ ಗಾಳಿ ಜೊತೆಗೆ ಸುರಿಯುವ ಜಡಿ ಮಳೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.

ಹಾಸನ, ಸಕಲೇಶಪುರ, ಹೆತ್ತೂರು, ಆಲೂರು, ಬೇಲೂರು ಭಾಗದಲ್ಲಿ ಮಂಗಳವಾರವೂ ಜೋರು ಮಳೆಯಾಗಿದೆ. ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಸೀಕೆರೆ, ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸೋನೆ ಸುರಿಯಿತು.

ಹಾಸನ ನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳವಾರ ಬೆಳಿಗ್ಗೆ ಬಿಡುವು ನೀಡಿ ಆರಂಭಗೊಂಡ ಮಳೆಯಿಂದ ಜನ ಪಡಿಪಾಟಲು ಪಡುವಂತಾಯಿತು. ಕಚೇರಿಗೆ ಹೋಗುವವರು, ನೌಕರರು ಸಮಸ್ಯೆ ಅನುಭವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.