ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ವಾರಾಂತ್ಯ ಕರ್ಫ್ಯೂ ಜಾರಿಗೆ ಸಾರ್ವಜನಿಕರ ವಿರೋಧ

ಕೋವಿಡ್‌ ಪ್ರಕರಣ ಹೆಚ್ಚಳ; ತಕ್ಷಣ ನಿರ್ಬಂಧ ಸಡಿಲಿಸಿ
Last Updated 7 ಜನವರಿ 2022, 16:24 IST
ಅಕ್ಷರ ಗಾತ್ರ

ಹಾಸನ: ಕೋವಿಡ್ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯ ಜಾರಿಗೊಳಿಸಿರುವ ನಿರ್ಧಾರಕ್ಕೆ ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಮಾತ್ರ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ರಾಜ್ಯದ ಎಲ್ಲ ಕಡೆಯೂಈ ಪರಿಸ್ಥಿತಿ ಇಲ್ಲ. ಕೋವಿಡ್‌ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದ ಹಾಸನಜಿಲ್ಲೆಯಲ್ಲೂ ಬಿಗಿ ಕ್ರಮಗಳನ್ನು ಜಾರಿಗೊಳಿಸಿರುವುದು ಸರಿಯಲ್ಲ. ತಕ್ಷಣ ನಿರ್ಬಂಧ
ಸಡಿಲಿಸಬೇಕು ಎಂದು ವರ್ತಕರು, ಚಾಲಕರು, ನಾಗರಿಕರು ಆಗ್ರಹಿಸಿದರು.

ವಾರದ ಐದು ದಿನ ಮುಕ್ತ ಓಡಾಟಕ್ಕೆ ಅವಕಾಶ ನೀಡಿ, ಎರಡು ದಿನ ಮಾತ್ರ ನಿರ್ಬಂಧಹೇರುವುದರಿಂದ ಯಾವುದೇ ಪ್ರಯೋಜನವಿಲ್ಲ. ಕೋವಿಡ್ ಮಾರ್ಗಸೂಚಿಯನ್ನುಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಂಡು ಜನ ಸಾಮಾನ್ಯರಲ್ಲಿ ಹೆಚ್ಚಿನ ಅರಿವುಮುಡಿಸಲು ಜಿಲ್ಲಾಡಳಿತ ಹೆಚ್ಚಿನ ಕಾಳಜಿ ವಹಿಸುವಂತೆ ಹಲವರು ಮನವಿ ಮಾಡಿದ್ದಾರೆ.

‘ಮೊದಲೇ ಅಕಾಲಿಕ ಮಳೆಯಿಂದ ಫಸಲು ನಾಶವಾಗಿ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಹಲವು ಕಡೆ ಕಾಫಿ ಕೊಯ್ಲು ಶುರುವಾಗಿದೆ. ಇಂತಹ ಸಂದರ್ಭದಲ್ಲಿಸರ್ಕಾರ ವಾರಾಂತ್ಯ ಕರ್ಫ್ಯೂ ವಿಧಿಸಿದರೆ ಕೃಷಿಕರು, ಕೂಲಿ ಕಾರ್ಮಿಕರ ಪಾಡಏನಾಬೇಕು’ ಎಂದು ಕಾಫಿ ಬೆಳೆಗಾರ ಜಗನ್ನಾಥ್‌ ಪ್ರಶ್ನಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ವಾರದಿಂದ ಕೋವಿಡ್ ಪಾಸಿಟಿವಿಟಿ ದರ ಶೇ 0.44 ರಷ್ಟಿದೆ. ನಿತ್ಯ3760 ಮಂದಿಗೆ ಕೋವಿಡ್‌ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಹತ್ತುಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ.

‘ಜಿಲ್ಲೆಯಲ್ಲಿಕೋವಿಡ್‌ ಪ್ರಕರಣಗಳು ಹೆಚ್ಚಾಗಿಲ್ಲ. ವಾರಾಂತ್ಯದ ನಿರ್ಬಂಧದಿಂದ ವ್ಯಾಪಾರಿಗಳಿಗೆ ತೊಂದರೆ ಆಗಲಿದೆ. ಹೋಟೆಲ್‌ ಉದ್ಯಮಕ್ಕೂ ನಷ್ಟ ಉಂಟಾಗುತ್ತದೆ. ಹಾಗಾಗಿಕರ್ಫ್ಯೂ ತೆರವುಗೊಳಿಸಬೇಕು’ ಎಂಬುದು ಹಾಸನ ಸಂಘ–ಸಂಸ್ಥೆಗಳ ಒಕ್ಕೂಟದ ಒತ್ತಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT