ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಲೂರು | ಕಾಡಾನೆ‌ ದಾಳಿ: ಗಂಭೀರ ಗಾಯ

Published 5 ಜುಲೈ 2024, 14:39 IST
Last Updated 5 ಜುಲೈ 2024, 14:39 IST
ಅಕ್ಷರ ಗಾತ್ರ

ಬೇಲೂರು: ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ವಾಟೆಹಳ್ಳಿಯಲ್ಲಿ ಕಾಫಿ ತೋಟದ ರೈಟರ್ ಒಬ್ಬರನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಎಸೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಐಬಿಸಿ ಎಸ್ಟೇಟ್‌ನ ರೈಟರ್ ಲಕ್ಷ್ಮಣ (46) ಗಾಯಗೊಂಡಿದ್ದು, ಅವರಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಫಿ ತೋಟದಲ್ಲಿ ಕೆಲಸ ನಿರ್ವಹಣೆ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಒಂಟಿಸಲಗ, ಸೊಂಡಿಲಿನಿಂದ ಎತ್ತಿ ಲಕ್ಷ್ಮಣ ಅವರನ್ನು ಬಿಸಾಡಿದೆ. ಸ್ವಲ್ಪದರಲ್ಲೇ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕಿನಲ್ಲಿ ಪದೇ ಪದೇ ಕಾಡಾನೆ ದಾಳಿ ನಡೆಯುತ್ತಿದ್ದು, ಜೀವ ಹಾನಿ ಹಾಗೂ ಬೆಳೆ ಹಾನಿ ಸಂಭವಿಸುತ್ತದೆ. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಂಡು ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೈತರು ಹಾಗೂ ಕಾಫಿ ಬೆಳೆಗಾರರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT