ಹಾಸನ: ಪ್ರಕೃತಿ ಸೊಬಗನ್ನು ಸವಿಯಲು ಬರುವ ಪ್ರವಾಸಿಗರಿಗೂ ಇದೀಗ ಆನೆಗಳ ಆತಂಕ ಎದುರಾಗಿದೆ. ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟದಲ್ಲಿ ಆನೆಗಳ ಹಿಂಡು ಬೀಡು ಬಿಟ್ಟಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ತಾಲ್ಲೂಕಿನ ಪ್ರಸಿದ್ಧ ಟ್ರೆಕ್ಕಿಂಗ್ ತಾಣವಾದ ಪಟ್ಲ ಬೆಟ್ಟದಲ್ಲಿ ನಾಲ್ಕು ದಿನಗಳಿಂದ 10 ಕಾಡಾನೆಗಳ ಗುಂಪು ಬೀಡು ಬಿಟ್ಟಿದೆ. ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಆನೆಗಳು ಸುತ್ತಾಡುತ್ತಿದ್ದು, ಸಾರ್ವಜನಿಕರ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ತಾತ್ಕಾಲಿಕವಾಗಿ ಇಲ್ಲಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಯಸಳೂರು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಮಲೆನಾಡು ಭಾಗದ ಕಾಫಿ ಬೆಳೆಗಾರರು, ಕೃಷಿಕರು ಎದುರಿಸುತ್ತಿದ್ದ ಸಂಕಷ್ಟವನ್ನು ಇದೀಗ ಪ್ರವಾಸಿಗರೂ ಎದುರಿಸುವಂತಾಗಿದೆ. ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿಗೆ ಬೇರೆ ಜಿಲ್ಲೆಗಳಿಂದಲೂ ಆನೆಗಳು ಬರುತ್ತಿವೆ. ಹೀಗಾಗಿ ಜಿಲ್ಲೆಯಲ್ಲಿ ಆನೆಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.

ಇತ್ತ ಕೊಡಗು ಜಿಲ್ಲೆಯಿಂದ ಆನೆಗಳು ಬರುತ್ತಿದ್ದರೆ, ಇನ್ನೊಂದೆಡೆ ಚಾರ್ಮಾಡಿ ಘಾಟಿಯಲ್ಲಿರುವ ಆನೆಗಳೂ ಜಿಲ್ಲೆಯನ್ನು ಪ್ರವೇಶಿಸುತ್ತಿವೆ. ಅಲ್ಲದೇ ಕೇರಳ, ತಮಿಳುನಾಡುಗಳಿಂದಲೂ ಆನೆಗಳು ಇಲ್ಲಿಗೆ ಬರುತ್ತಿವೆ ಎನ್ನುವ ಮಾಹಿತಿ ಇದೆ.

ಆನೆಗಳಿಗೆ ಸುರಕ್ಷಿತ ತಾಣವೇ?: ಜಿಲ್ಲೆಯ ಅದರಲ್ಲೂ ಬಿಸಿಲೆ ಘಾಟ್ ಪ್ರದೇಶ ಹಾಗೂ ಬೇಲೂರು ತಾಲ್ಲೂಕಿನ ಹಲವೆಡೆ ಆನೆಗಳು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ. ಅಲ್ಲಿಯೇ ಬಿಡಾರ ಹೂಡಿರುವ ಆನೆಗಳು, ನಿತ್ಯ ಕಾಫಿ ತೋಟ, ರೈತರ ಹೊಲಗಳಿಗೆ ಲಗ್ಗೆ ಇಡುತ್ತಿವೆ.

ಆನೆಗಳು ಸುಮಾರು 1 ಸಾವಿರ ಕಿ.ಮೀ. ಪ್ರದೇಶದಲ್ಲಿ ಓಡಾಡುತ್ತವೆ. ಅವುಗಳಿಗೆ ನಿತ್ಯ 250 ಕೆ.ಜಿ.ಯಷ್ಟು ಇಷ್ಟವಾದ ಆಹಾರ ಬೇಕು. ಹಾಗಾಗಿ ಕಾಡಾನೆಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಓಡಾಡುತ್ತಲೇ ಇರುತ್ತವೆ. ಅದರಲ್ಲೂ ಸಕಲೇಶಪುರ ತಾಲ್ಲೂಕಿನ ಹಾಗೂ ಬೇಲೂರು ತಾಲ್ಲೂಕಿನ ಕಾಫಿ ತೋಟಗಳು ಆನೆಗಳ ಆವಾಸಸ್ಥಾನವಾಗಿ ಪರಿವರ್ತನೆಯಾಗಿವೆ.

ಸಕಲೇಶಪುರ ತಾಲ್ಲೂಕಿನಲ್ಲಿ ಕಾಫಿ ತೋಟ, ಅರಣ್ಯ ಪ್ರದೇಶವಿದ್ದರೆ, ಬೇಲೂರು ತಾಲ್ಲೂಕಿನ ಹೊಲಗದ್ದೆಗಳಲ್ಲಿ ಬೆಳೆದಿರುವ ಮೆಕ್ಕೆ ಜೋಳ ಆನೆಗಳನ್ನು ಆಕರ್ಷಿಸುತ್ತಿವೆ. ಇನ್ನೊಂದೆಡೆ ಚಿಕ್ಕಮಗಳೂರು ಭಾಗದ ಆನೆಗಳೂ ಬೇಲೂರು ತಾಲ್ಲೂಕಿನತ್ತ ನುಗ್ಗುತ್ತಿವೆ. ಕೊಡಗು ಜಿಲ್ಲೆಯಿಂದ ಅರಕಲಗೂಡು ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಆನೆಗಳು ಸಂಚರಿಸುತ್ತಿವೆ.

ಆನೆಗಳ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಲೇ ಇದ್ದೇವೆ. ಅಧಿವೇಶನದಲ್ಲೂ ಪ್ರಸ್ತಾಪಿಸಲಾಗಿದೆ. ಈ ಕುರಿತು ಸಚಿವರ ಜೊತೆ ಚರ್ಚಿಸಲಾಗುವುದು
ಸಿಮೆಂಟ್ ಮಂಜು ಶಾಸಕ

ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ

ಕಾಡಾನೆಗಳ ಸಂಚಾರ ಹೆಚ್ಚಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು ಹಾಗೂ ಟ್ರೆಕ್ಕಿಂಗ್ ಪ್ರಿಯರು ಇಲಾಖೆಗೆ ಸಹಕರಿಸಿ ನಿಷೇಧ ಅವಧಿಯಲ್ಲಿ ಪಟ್ಲ ಬೆಟ್ಟದ ಕಡೆಗೆ ತೆರಳಬಾರದು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ನಿಗಾ ವಹಿಸಿದ್ದು ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಟ್ಲ ಬೆಟ್ಟಕ್ಕೆ ಬರುವ ಪ್ರವಾಸಿಗರು ಹಾಗೂ ಸ್ಥಳೀಯರು ಸುರಕ್ಷತೆಯ ದೃಷ್ಟಿಯಿಂದ ಇಲಾಖೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.