ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಮಕ್ಕಳ ನಾಪತ್ತೆ ಗಂಭೀರವಾಗಿ ಪರಿಗಣಿಸಿ

ಅಧಿಕಾರಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಸೂಚನೆ
Last Updated 14 ಸೆಪ್ಟೆಂಬರ್ 2021, 15:26 IST
ಅಕ್ಷರ ಗಾತ್ರ

‌ಹಾಸನ: ಮಹಿಳೆಯರು, ಅಪ್ರಾಪ್ತ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಬಾಲ್ಯವಿವಾಹ ತಡೆಗಟ್ಟಲು ಹೆಚ್ಚಿನ ಅರಿವು ಮೂಡಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ. ಎಸ್. ಕುಂದರ್ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ದೌರ್ಜನ್ಯ ನಿಯಂತ್ರಣ ಕ್ರಮಗಳಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಖಿ ಒನ್ಸ್ಟಾಪ್ ಸೆಂಟರ್ ಯೋಜನೆಯು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದರು.

ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಅಪಹರಣ ಹಾಗೂ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ 24 ದೌರ್ಜನ್ಯ ಪ್ರಕರಣಗಳಿದ್ದು, ಅವುಗಳನ್ನು ಪರಿಶೀಲಿಸಿ ಲೈಂಗಿಕವಾಗಿ ತೊಂದರೆಯಾಗಿದ್ದಲ್ಲಿ ಎಫ್.ಐ.ಆರ್ ದಾಖಲಿಸುವಂತೆ ತಿಳಿಸಿದರು.

ಮದುವೆ ವಯಸ್ಸನ್ನು ಹೆಣ್ಣು ಮಕ್ಕಳಿಗೆ 21 ವರ್ಷ ಹಾಗೂ ಗಂಡು ಮಕ್ಕಳಿಗೆ 25 ವರ್ಷನಿಗದಿಪಡಿಸುವುದರ ಬಗ್ಗೆ ಆಯೋಗ ಚಿಂತನೆ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸಲಾಗುವುದು ಎಂದರು.

ಮದುವೆಗೆ ಮುನ್ನ ಗ್ರಾಮ ಪಂಚಾಯಿತಿ ಅನುಮತಿ ನೋಂದಣಿ ಕಡ್ಡಾಯ ಮಾಡಿದರೆ ಬಾಲ್ಯ ವಿವಾಹತಡೆಗಟ್ಟಲು ಸಾಧ್ಯ.ಕೌಟುಂಬಿಕ ಹಿಂಸೆಯಿಂದ ಮಹಿಳೆಯರು ಪೊಲೀಸ್ ಠಾಣೆಗಳಿಗೆ ದೂರು ನೀಡಿದಾಗ ಅವರಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು.

ಸ್ವಾಧಾರ ಕೇಂದ್ರದಿಂದ ಮಹಿಳೆಯರಿಗೆ ನೀಡುತ್ತಿರುವ ತರಬೇತಿ ಸಾಮರ್ಥ್ಯ ಹೆಚ್ಚಿಸಿ, ಅಗತ್ಯವಿದ್ದರೆ ಹೊಸಕೇಂದ್ರ ಪ್ರಾರಂಭಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶ್ಯಾಮಲ ಹೇಳಿದರು.

ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಶೌಚಾಲಯ ನಿರ್ಮಾಣವಾಗಬೇಕು ಹಾಗೂ ಬಯಲು ಬಹಿರ್ದೆಸೆ ಪದ್ಧತಿಅನುಸರಿಸದಂತೆ ಅರಿವು ಮೂಡಿಸಬೇಕು. ಮಹಿಳಾ ದೌರ್ಜನ್ಯ ಕುರಿತು ಬರುವ ಪ್ರಕರಣಗಳಿಗೆ ಸಾಂತ್ವನ ಹೇಳುವ ಮೂಲಕ ಸಮಸ್ಯೆ ಬಗೆಹರಿಸಬೇಕು. ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ತಳಸಮುದಾಯದ ಜನರಿಗೆ ಸೌಲಭ್ಯ ಕಲ್ಪಿಸಿ ಪೌಷ್ಟಿಕ ಆಹಾರ ನೀಡಲು ಕ್ರಮವಹಿಸುವಂತೆ ಸೂಚಿಸಿದರು.

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ಆಂತರಿಕ ಸಮಿತಿ ರಚಿಸಿಕೊಳ್ಳಬೇಕು ಹಾಗೂ ದೌರ್ಜನ್ಯಗಳು ನಡೆದಾಗ ಕಾನೂನಿನ ಮೂಲಕ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಮಾತನಾಡಿ, ಪೊಲೀಸ್ ಇಲಾಖೆ ವತಿಯಿಂದ ಸ್ಪಂದನಾ ಎಂಬ ಸಹಾಯವಾಣಿ ಆರಂಭಿಸಲಾಗಿದ್ದು, ಸಾಕಷ್ಟು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶಟ್ಟಪ್ಪನವರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT