ಶನಿವಾರ, ಜೂನ್ 19, 2021
26 °C

ರಸ್ತೆ ಬದಿ ಮಲಗಿದ್ದ ಮಹಿಳೆ ಹತ್ಯೆಗೈದು ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನಗರದ ಎನ್‌.ಆರ್‌.ವೃತ್ತದ ಬಳಿ ಅಪರಿಚಿತ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು, ಅತ್ಯಾಚಾರ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸೋಮವಾರ ರಾತ್ರಿ 11.45ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, 40 ರಿಂದ 45 ವರ್ಷದ ಮಹಿಳೆ ಯಾರು ಎಂಬುದು ತಿಳಿದು ಬಂದಿಲ್ಲ. ನಿತ್ಯ ಭಿಕ್ಷೆ ಬೇಡಿ ಜೀವನ ಮಾಡುತ್ತಿದ್ದ ಮಹಿಳೆಗೆ ವಾಸಿಸಲು ಮನೆ ಇಲ್ಲದೆ ಬೀದಿ ಬದಿಯಲ್ಲೇ ಮಲಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಹಿಳೆ ನಿದ್ರೆಯಲ್ಲಿದ್ದಾಗ ಅಲ್ಲಿಗೆ ಬಂದ ವ್ಯಕ್ತಿ, ಅನುಚಿತವಾಗಿ ವರ್ತಿಸಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿದಾಗ ರಸ್ತೆ ಬದಿ ಬಿದ್ದಿದ್ದ ಸಿಮೆಂಟ್ ಇಟ್ಟಿಗೆಯನ್ನು ಆಕೆಯ ಮೇಲೆ ಎತ್ತಿ ಹಾಕಿದ್ದಾನೆ. ತೀವ್ರ ಪೆಟ್ಟು ಬಿದ್ದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ
ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು