ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುವತಿ ಸಾವು: ಡೆಂಗಿ ಜ್ವರದ ಶಂಕೆ

Published 7 ಜುಲೈ 2024, 14:07 IST
Last Updated 7 ಜುಲೈ 2024, 14:07 IST
ಅಕ್ಷರ ಗಾತ್ರ

ಹಾಸನ: ಜ್ವರದಿಂದ ಬಳಲುತ್ತಿದ್ದ ಯುವತಿಯೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಡೆಂಗಿ ಶಂಕೆ ವ್ಯಕ್ತವಾಗಿದೆ.

ಸುಪ್ರೀತಾ (26) ಮೃತಪಟ್ಟಿರುವ ಯುವತಿ. ಅರಸೀಕೆರೆ ತಾಲ್ಲೂಕಿನ ಮುದುಡಿ ತಾಂಡ್ಯದ ಸುಪ್ರೀತಾ, ಜೂಲುನಾಯ್ಕ-ಸುಮಿತ್ರಾದೇವಿ ದಂಪತಿಯ ಪುತ್ರಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಸುಪ್ರೀತಾ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರೀತಾಗೆ ಬಹು ಅಂಗಾಂಗ ವೈಫಲ್ಯ ಕಾಣಿಸಿಕೊಂಡಿದೆ. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಪೋಷಕರು ಆಕೆಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಸುಪ್ರೀತಾ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗಿ ಸಾವಿನ ಸಂಖ್ಯೆ ಏಳಕ್ಕೆ ಏರಿದೆ. ಈ ಪೈಕಿ ಮೂರು ಮಕ್ಕಳು ಡೆಂಗಿನಿಂದ ಮೃತಪಟ್ಟಿರುವುದು ದೃಢವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT