ಹಾಸನ: ತಂಬಾಕು ಉತ್ಪನ್ನಗಳನ್ನು ಬಳಸದಂತೆ ಜಾಹೀರಾತುಗಳಿದ್ದರೂ, ಯುವ ಸಮುದಾಯ ತಂಬಾಕು ಉತ್ಪನ್ನ ಬಳಸುತ್ತಿದ್ದಾರೆ. ತಂಬಾಕು ಸೇವನೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ. ತಿಳಿಸಿದರು.

ಹಾರನಹಳ್ಳಿ ರಾಮಸ್ವಾಮಿ ಉನ್ನತ ಶಿಕ್ಷಣ ಸಂಸ್ಥೆ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಾರನಹಳ್ಳಿ ರಾಮಸ್ವಾಮಿ ಉನ್ನತ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಆಕರ್ಷಕ ಉತ್ಪನ್ನಗಳು, ಕರಾಳ ಉದ್ದೇಶಗಳು ಎಂಬ ಧ್ಯೇಯವಾಕ್ಯದೊಂದಿಗೆ ಈ ತಂಬಾಕು ರಹಿತ ದಿನ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಹಾರನಹಳ್ಳಿ ರಾಮಸ್ವಾಮಿ ಉನ್ನತ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ.ಬಿ. ಹೇಮಂತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಏಡ್ಸ್ ಮತ್ತು ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ವಿಜಯ್ ಗೊರೂರು ಎನ್.ಡಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರದೀಪ್ ಡಿ.ಪಿ., ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ.ಎಂ.ಕೆ. ಪಾರ್ಥ, ಪ್ರಾಂಶುಪಾಲ ಅರುಣ್ ಕುಮಾರ್ ಬಿ.ಎನ್., ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.