ಬೇಲೂರು: ಯಗಚಿ ಜಲಾಶಯ ಭರ್ತಿ

ಬೇಲೂರು: ತಾಲ್ಲೂಕಿನ ಯಗಚಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಐದು ಕ್ರಸ್ಟ್ ಗೇಟ್ ಮೂಲಕ ನದಿಗೆ 1,200 ಕ್ಯುಸೆಕ್ ನೀರನ್ನು ಬಿಡಲಾಯಿತು.
ಚಿಕ್ಕಮಗಳೂರು, ಮೂಡಿಗೆರೆ ಹಾಗೂ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಯಗಚಿ ಜಲಾಶಯ ಭರ್ತಿಯಾಗಿದ್ದು, ಬುಧವಾರ ರಾತ್ರಿಯಿಂದ ನದಿಗೆ ನೀರು ಬಿಡಲಾಯಿತು. ನೀರಿನ ಹರಿವು ನೋಡಲು ಮಳೆಯನ್ನು ಲೆಕ್ಕಿಸದೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ.
‘3.3 ಟಿಎಂಸಿ ಸಾಮರ್ಥ್ಯದ ಯಗಚಿ ಜಲಾಶಯಕ್ಕೆ 1,200 ಕ್ಯೂಸೆಕ್ ಒಳ ಹರಿವಿದ್ದು, 1,200 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾದರೆ ಹೆಚ್ಚಿನ ನೀರನ್ನು ನದಿಗೆ ಬಿಡಲಾಗುವುದು’ ಎಂದು ಯಗಚಿ ಯೋಜನಾ ವಿಭಾಗದ ಸಹಾಯಕ ಎಂಜಿನಿಯರ್ ಶಿವಕುಮಾರ್ ಪತ್ರಿಕೆಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.