ಯುವಜನರಲ್ಲಿ ಕ್ರೀಡಾ ಆಸಕ್ತಿ ಕುಂಠಿತ

7
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶಮೂರ್ತಿ ಬೇಸರ

ಯುವಜನರಲ್ಲಿ ಕ್ರೀಡಾ ಆಸಕ್ತಿ ಕುಂಠಿತ

Published:
Updated:
Deccan Herald

ಹಾಸನ : ಯುವಕರಲ್ಲಿ ಕ್ರೀಡಾ ಚಟುವಟಿಕೆ ಬಗ್ಗೆ ಆಸಕ್ತಿ ಕುಂಠಿತವಾಗುತ್ತಿದ್ದು, ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶಮೂರ್ತಿ ಹೇಳಿದರು.

ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಮಲೆನಾಡು ವಲಯ ಮಹಿಳೆಯರ ವಾಲಿಬಾಲ್ ಜಿಲ್ಲಾ ಮಟ್ಟದ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಪ್ರಾಥಮಿಕ ಹಂತದಲ್ಲಿ ಮಕ್ಕಳು ಹೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಉನ್ನತ ಶಿಕ್ಷಣಕ್ಕೆ ಬರುವ ವೇಳೆಗೆ ಕ್ರೀಡೆ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡರೆ ಶಿಕ್ಷಣದ ಕಡೆ ಆಸಕ್ತಿ ವಹಿಸುವುದಿಲ್ಲ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಕ್ರೀಡೆಯಿಂದ ದೂರು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದ್ದು, ಕ್ರೀಡೆಯಲ್ಲಿ ಪಾಲ್ಗೊಳ್ಳುವ ಯುವಕರಿಗೆ ಹೆಚ್ಚು ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ಸಿಗುವ ಸಾಧ್ಯತೆ ಇದೆ ಎಂದರು.

ಪ್ರಾಂಶುಪಾಲ ಮೋಹನ್ ಕುಮಾರ್ ಮಾತನಾಡಿ, ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸೋಲು, ಗೆಲವು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಮಲೆನಾಡು ವಲಯ ಜಿಲ್ಲಾ ಸಂಚಾಲಕ ಕೆ.ಟಿ. ಮಹೇಂದ್ರ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಯೋಗೇಶ್, ಅಧ್ಯಾಪಕರಾದ ಕೆ.ಡಿ. ಮುರಳೀಧರ, ಎಂ.ಕೆ. ಮಹೇಶ್, ರಾಮೇಗೌಡ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !