ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರೇ ಸಿ.ಎಂ: ಪ್ರೀತಂ ಜೆ.ಗೌಡ

Last Updated 19 ಜುಲೈ 2021, 13:25 IST
ಅಕ್ಷರ ಗಾತ್ರ

ಹಾಸನ: ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ವೈರಲ್ ಆಗಿರುವುದನ್ನು ಗಮನಿಸಿಲ್ಲ. ಅದನ್ನು ಪೂರ್ಣವಾಗಿ ಕೇಳಿದ ನಂತರ ಮಾತನಾಡುತ್ತೇನೆ. ರಾಜ್ಯದಲ್ಲಿ ಯಡಿಯೂರಪ್ಪ ಪ್ರಶ್ನಾತೀತ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇದು ಎಲ್ಲಾ ಶಾಸಕರು ಹಾಗೂ ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಯಡಿಯೂರಪ್ಪ ದೆಹಲಿಗೆ ಭೇಟಿ ದೊಡ್ಡ ವಿಚಾರವಾಗಿದೆ. ಆದರೆ ಸಾಮಾನ್ಯ ಶಾಸಕನಾದ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸಚಿವ ಸಂಪುಟ ವಿಸ್ತರಣೆಯೂ ದೊಡ್ಡವರ ವಿಚಾರ. ಅಲ್ಲದೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವವರ ವಿರುದ್ಧ ದೊಡ್ಡವರು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT