ಭಾನುವಾರ, ಏಪ್ರಿಲ್ 2, 2023
33 °C

ಚೂರಿಯಿಂದ ಇರಿದು ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಆಲೂರು ತಾಲ್ಲೂಕಿನ ಮಗ್ಗೆ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ.

ಮಗ್ಗೆ ಗ್ರಾಮದ ಭರತ್ (24) ಕೊಲೆಯಾದ ಯುವಕ. ಮದ್ಯಸೇವಿಸಿದ ನಂತರ ಜಗಳ ಆರಂಭವಾಗಿದ್ದು, ಕೋಪದಲ್ಲಿ ಆರೋಪಿ ಚೂರಿಯಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಭರತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಕುವಿನಿಂದ ಇರಿದ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು