ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಾಡುತ್ತಿದ್ದ ಯುವಕರು; 6 ಬೈಕ್ ವಶ

Last Updated 27 ಮಾರ್ಚ್ 2020, 12:14 IST
ಅಕ್ಷರ ಗಾತ್ರ

ಹಿರೀಸಾವೆ: ಹೋಬಳಿಯ ಎಂ.ಕೆ.ಹೊಸೂರು ಬಳಿ ಶುಕ್ರವಾರ ಯುವಕರು ಕಲ್ಲಿನ ಕೋರೆಯಲ್ಲಿ ಈಜಾಡುತ್ತಿರುವ ವಿಷಯ ತಿಳಿದ ಪೋಲಿಸರು ದಾಳಿ ಮಾಡಿ, 6 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ದಿಡಗ, ಜಿನ್ನೇನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ದಾಳಿ ಮಾಡಿದ್ದಾರೆ. ಯುವಕರುಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಇದ್ದ ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರ ಪ್ರದೇಶದಿಂದ ಹಳ್ಳಿಗೆ ಬಂದಿರುವ ಯುವಕರಿಂದ ಸ್ಥಳಿಯ ಜನರಿಗೆ ತೊಂದರೆಯಾಗುತ್ತಿದ್ದೆ. ಹಳ್ಳಿಗಳಲ್ಲಿ ಅನಗತ್ಯವಾಗಿ ಗುಂಪು ಸೇರಿಸುತ್ತಿದ್ದಾರೆ, ಇವರುಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಐ ಭವಿತಾ ತಿಳಿಸಿದರು.

ಕೋವಿಡ್–19 ಕೋರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್‌ನ 3ನೇ ದಿನ ಪೊಲೀಸರು ಹಿರೀಸಾವೆ ಹೋಬಳಿಯಲ್ಲಿ ಅಗತ್ಯ ವಸ್ತುಗಳನ್ನು ಕೊಳ್ಳಲು ಶುಕ್ರವಾರ ಬೆಳಿಗ್ಗೆ 7ರಿಂದ 10 ಗಂಟೆವರೆಗೆ ಅವಕಾಶ ಮಾಡಿಕೊಟ್ಟರು. ತರಕಾರಿ, ದಿನಸಿ, ಮೆಡಿಕಲ್ ಶಾಪ್‌ಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ವ್ಯಾಪಾಸ್ಥರಿಗೆ ಮತ್ತು ಸಾರ್ವಜನಿಕರಿಗೆ ಸೂಚನೆ ನೀಡಿದರು. ಶುದ್ಧ ಕುಡಿಯವ ನೀರಿನ ಘಟಕದ ಮುಂದೆ ಮತ್ತು ಮೆಡಿಕಲ್ ಶಾಪ್ ಮುಂದೆ ನೂರಾರು ಜನರು ಸೇರಿದ್ದರು. ಪೊಲೀಸರು ಎಲ್ಲರನ್ನು ದೂರ, ದೂರ ನಿಲ್ಲಿಸಿದರು.

ಹೋಬಳಿಯ ಹಲವು ಗ್ರಾಮಗಳಲ್ಲಿ ತೆರೆದಿದ್ದ ಅಂಗಡಿಗಳನ್ನು ಬಂದ್ ಮಾಡಿಸಿದರು. ಅನಗತ್ಯವಾಗಿ ಬೈಕ್ ಮತ್ತು ವಾಹನಗಳಲ್ಲಿ ಓಡಾಡುತ್ತಿದ್ದವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ರಾಷ್ಟ್ರೀಯ ಹೆದ್ದಾರಿ 75ರ ಹಾಸನ–ಮಂಡ್ಯ ಗಡಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT