ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರಲು ಸಲಹೆ ನೀಡಿದ್ದೇ ಜಮೀರ್‌: ಗೋಪಾಲಯ್ಯ

ಸಮ್ಮಿಶ್ರ ಸರ್ಕಾರ ಕೆಡವಲು ಜಮೀರ್‌ಗೂ ಇಷ್ಟವಿತ್ತು: ಸಚಿವ
Last Updated 26 ಅಕ್ಟೋಬರ್ 2021, 15:51 IST
ಅಕ್ಷರ ಗಾತ್ರ

ಹಾಸನ: ‘ಶಾಸಕ ಜಮೀರ್‌ ಅಹಮದ್‌ ಮತ್ತು ನಾನು ಜೆಡಿಎಸ್‌ನಲ್ಲಿ ಇದ್ದಾಗಿನಿಂದಲೂ ಒಳ್ಳೆಯ ಸ್ನೇಹಿತರು. ನನಗೆ ಬಿಜೆಪಿ ಸೇರಲು ಸಲಹೆ ನೀಡಿದ್ದೇ ಅವರು’ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

‘ಹಿಂದಿನ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸಗಳು ಸರಿಯಾಗಿ ಆಗುತ್ತಿರಲಿಲ್ಲ. ಹಾಗಾಗಿ ಸರ್ಕಾರ ಕೆಡವಲು ಜಮೀರ್‌ಗೂ ಇಷ್ಟವಿತ್ತು. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಹೇಳಿನನ್ನನ್ನು ಬಿಜೆಪಿಗೆ ಹೋಗುವಂತೆ ಹೇಳಿದರು. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರನ್ನುಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿತಿಳಿಸಿದರು.

‘ಯಾವುದೇ ವಿಚಾರವಾಗಿ ರಾಜಕೀಯ ನಾಯಕರು ಎಚ್ಚರಿಕೆಯಿಂದ ಮಾತನಾಡಬೇಕು. ಸಿಂದಗಿ ಮತ್ತುಹಾನಗಲ್‌ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ನಾಯಕರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ರಾಜ್ಯದ ಜನ ಗಮನಿಸುತ್ತಿರುತ್ತಾರೆ. ಈ ವಿಚಾರದಲ್ಲಿ ಜಮೀರ್‌ ಅವರ ಪದ ಬಳಕೆಯನ್ನು ಖಂಡಿಸುತ್ತೇನೆ’ ಎಂದರು.

‘ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಕ್ಷೇತ್ರದ ಜನರಿಗೆ ಒಳ್ಳೆಯ ಕೆಲಸ ಮಾಡಿದ್ದೇನೆ. ಮುಂದೆಯೂ ಪಕ್ಷ ಟಿಕೆಟ್‌ ನೀಡಲಿದೆ. ಎಲ್ಲವೂ ಸಿಕ್ಕಿದೆ. ಬೇರೆ ಪಕ್ಷಕ್ಕೆ ಹೋಗಿ ಏನು ಮಾಡಲಿ? ನಾನು ಬಿಜೆಪಿಯಲ್ಲೇ ಇರುತ್ತೇನೆ ಮತ್ತು ನನ್ನ ಮಕ್ಕಳಿಗೂ ಹೇಳುತ್ತೇನೆ. ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಾಸಕ ಪ್ರೀತಂ ಜೆ.ಗೌಡ, ಹಾಸನ ನಗರಸಭೆ ಅಧ್ಯಕ್ಷ ಆರ್‌. ಮೋಹನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT