ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲ ಮೂಲಗಳ ಒತ್ತುವರಿ ತೆರವಿಗೆ ಆಗ್ರಹ

Last Updated 13 ಜೂನ್ 2017, 8:52 IST
ಅಕ್ಷರ ಗಾತ್ರ

ಹಾಸನ: ‘ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಹೊಸಹಳ್ಳಿ ಹಾಗೂ ಕಿತ್ತನಕೆರೆ ಗ್ರಾಮಗಳ ಕೆರೆ, ಕಟ್ಟೆ ಹಾಗೂ ರಾಜ ಕಾಲುವೆಯಲ್ಲಿ ಮಾಡಿರುವ ಒತ್ತುವರಿ ತೆರೆವುಗೊಳಿಸುವಂತೆ ಆಗ್ರಹಿಸಿ ಹೊಸಹಳ್ಳಿ ಗ್ರಾಮದ ಗಂಗಾಧರಪ್ಪ ಮತ್ತು ರವಿಶಂಕರ್‌ ಜಿಲ್ಲಾಧಿಕಾರಿ ಕಚೇರಿ ಮುಂದೆ ಗಾಂಧೀಜಿ ಭಾವಚಿತ್ರವಿಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.

ನೀರಿನ ಮೂಲಗಳು ಪ್ರಭಾವಿಗಳ ಪಾಲಾಗುತ್ತಿದ್ದು, ಇದರಿಂದ ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದೆ ಎಂದು ತುಂತುರು ಮಳೆಯಲ್ಲೇ ಕೊಡೆ ಹಿಡಿದು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಎರಡು ಗ್ರಾಮಗಳ ಕೆರೆ, ಕಟ್ಟೆ ಹಾಗೂ ರಾಜ ಕಾಲುವೆಗಳು ಒತ್ತುವರಿಯಾಗಿರುವ ಬಗ್ಗೆ ಹಲವು ವರ್ಷಗಳಿಂದ ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ. ಆದರೆ, ಇದುವರೆಗೂ ಒತ್ತುವರಿ ಜಾಗ ತೆರವುಗೊಳಿಸಿಲ್ಲ. ಕೆರೆ ಅಂಗಳ ಒತ್ತುವರಿ ಮಾಡಿರುವುದರಿಂದ ಈ ಸುತ್ತಲಿನ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಜಾನುವಾರುಗಳ ಮೇವು ಮತ್ತು ಕುಡಿಯುವ ನೀರಿಗೂ ಬರ ಬಂದಿದೆ. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಒತ್ತುವರಿದಾರರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಅವರಿಗೆ  ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಮುಂಗಾರು ಪ್ರಾರಂಭವಾಗಿದೆ. ಕೆರೆ, ಕಟ್ಟೆ  ಒತ್ತುವರಿ ಆಗಿರುವುದರಿಂದ ಮಳೆ ನೀರು ಸಂಗ್ರಹಕ್ಕೆ ಸಮಸ್ಯೆಯಾಗಿದೆ. ತಾಲ್ಲೂಕಿನ ಕಿತ್ತನಕೆರೆ ಗ್ರಾಮದ ಸರ್ವೆ ನಂ 114/1 ಕಟ್ಟೆ , ಹೊಸಹಳ್ಳಿ ಗ್ರಾಮ ಸರ್ವೆ ನಂ 42 ಗೋಕಟ್ಟೆ , ಸರ್ವೆ ನಂ 39 ರ ಕೆರೆ, ಸರ್ವೆ ನಂ 53 ಸಿದ್ದಪ್ಪ ಕಟ್ಟೆಗೆ ಲೋಕೋಪಯೋಗಿ ರಸ್ತೆಯಿಂದ ಸೇತುವೆ ಮಾಡಿ ಮೊದಲು ಬರುತ್ತಿದ್ದ ನೀರನ್ನು ಸಂಗ್ರಹ ಮಾಡಲು ಮತ್ತೆ ವ್ಯವಸ್ಥೆ ಮಾಡಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸರ್ವೆ ನಂ 27ರಲ್ಲಿರುವ ಎರಡು ಕಟ್ಟೆ ಹಾಗೂ ದಿಬ್ಬೂರು ಗ್ರಾಮದ ಸರ್ವೆ ನಂ 157 ಗೌಡನಕಟ್ಟೆ ಒತ್ತುವರಿಯಾಗಿದೆ.  ಇವುಗಳ ಬಗ್ಗೆ ಈಗಾಗಲೇ      ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಒತ್ತುವರಿ ಜಾಗ ತೆರವುಗೊಳಿಸಿಲ್ಲ. ಇನ್ನಾದರೂ ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT