ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲೆ ನಿಗಾ: ಪೋಷಕರಿಗೆ ಮೆಹಬೂಬಾ ಮನವಿ

Last Updated 7 ಮೇ 2018, 19:30 IST
ಅಕ್ಷರ ಗಾತ್ರ

ಶ್ರೀನಗರ: ‘ತಮ್ಮ ಮಕ್ಕಳು ಉಗ್ರಗಾಮಿ ಸಂಘಟನೆ ಸೇರಿ ಸಾವನ್ನು ತಂದುಕೊಳ್ಳದಂತೆ ಪೋಷಕರು ಎಚ್ಚರ ವಹಿಸಬೇಕು’ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮನವಿ ಮಾಡಿದ್ದಾರೆ.

ಶೋಪಿಯಾನ್‌ನಲ್ಲಿ ಉಗ್ರರ ವಿರುದ್ಧ ಭಾನುವಾರ ನಡೆದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಿಂದಾಗಿ ಐವರು ನಾಗರಿಕರು ಮೃತಪಟ್ಟ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

‘ನಾಗರಿಕರ ಸಾವು ಬೇಸರದ ಸಂಗತಿ. ಬಡ ಯುವಕರು ಮತ್ತು ಭದ್ರತಾ ಪಡೆಗಳ ಯೋಧರು ಹಿಂಸಾಚಾರಕ್ಕೆ ಬಲಿಯಾಗುತ್ತಿದ್ದು, ಹಿಂಸಾಚಾರ ಕೊನೆಗೊಳಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT