ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: 173 ಮಕ್ಕಳು ಗೈರು

ಜಿಲ್ಲೆಯಲ್ಲಿ ಸುಸೂತ್ರವಾಗಿ ಮುಗಿದ ಪರೀಕ್ಷೆ: ನಿರಾಳರಾದ ವಿದ್ಯಾರ್ಥಿಗಳು
Last Updated 3 ಜುಲೈ 2020, 16:46 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ತೃತೀಯ ಭಾಷೆ ಪತ್ರಿಕೆಯೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯವಾಯಿತು. ಕೊರೊನಾ ಸೋಂಕುಭೀತಿಯ ಸಂದರ್ಭದಲ್ಲಿ ಸುರಕ್ಷಿತಾ ಕ್ರಮಗಳನ್ನು ಪಾಲನೆ ಮಾಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಕಡೆಯ ಪರೀಕ್ಷೆಯಾದ ತೃತೀಯ ಭಾಷೆಗೆ 20,400 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,227 ಪರೀಕ್ಷಾರ್ಥಿಗಳು ಹಾಜರಾಗಿದ್ದರು. ಆದರೆ, 173 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಕಂಟೈನ್‌ಮೆಂಟ್‌ ಪ್ರದೇಶದಿಂದ ಬಂದಿದ್ದ 283 ವಿದ್ಯಾರ್ಥಿಗಳು ಹಾಗೂ ಅನಾರೋಗ್ಯ ಕಾರಣದಿಂದ 23 ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಿ, ಪರೀಕ್ಷೆ ಬರೆಸಲಾಯಿತು. 19,708 ಮಕ್ಕಳು ಮೊದಲ ಬಾರಿಗೆ ಪರೀಕ್ಷೆ ಬರೆದರು. 459 ಖಾಸಗಿ ಅಭ್ಯರ್ಥಿಗಳಲ್ಲಿ 75 ಮಂದಿ ಗೈರು ಹಾಜರಾಗಿದ್ದರು. 64 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳ ಪೈಕಿ 17 ಮಂದಿ ಗೈರು ಹಾಜರಾಗಿದ್ದರು.

ವಲಸೆ ಬಂದ 695 ವಿದ್ಯಾರ್ಥಿಗಳ ಪೈಕಿ, 691 ಮಂದಿ ಪರೀಕ್ಷೆ ಬರೆದು, 4 ಮಕ್ಕಳು ಗೈರು ಹಾಜರಾಗಿದ್ದರು. ಯಾವುದೇ ವಿದ್ಯಾರ್ಥಿ ಡಿಬಾರ್‌ ಆಗಿಲ್ಲ ಎಂದು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಶಸ್ವಿ ಪರೀಕ್ಷೆ: ಡಿಡಿಪಿಐ ಕೃತಜ್ಞತೆ

ಜೂನ್ 25ರಿಂದ ಜುಲೈ 3ರವರೆಗೆ ಜಿಲ್ಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಯಶಸ್ಸಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತುಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಕೃತಜ್ಞತೆ ಸಲ್ಲಿಸಿದ್ದಾರೆ.

ಕೋವಿಡ್-19 ತುರ್ತು ಸಂದರ್ಭದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯವು ಸುಸೂತ್ರವಾಗಿ ನಡೆಯಲು ಶ್ರಮವಹಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಪೊಲೀಸ್‌‌ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಪ್ರಾದೇಶಿಕ ಸಾರಿಗೆ ಆಯುಕ್ತರು, ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ, ಶಿಕ್ಷಣ ಇಲಾಖೆಯು ಹೆಚ್ಚುವರಿ ಆಯುಕ್ತರ ಸಹಕಾರ ಮತ್ತು ಶಿಕ್ಷಕರು, ವೈದ್ಯಕೀಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಇಲಾಖೆ ಪರವಾಗಿ ಅಭಿನಂದನೆಗಳು ಸಲ್ಲುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT