‘3549 ಬಾಕಿ ಪ್ರಕರಣ ಶೀರ್ಘ ಇತ್ಯರ್ಥ'

ಹಾವೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯೋಗದಲ್ಲಿ 3549 ಪ್ರಕರಣಗಳು ಬಾಕಿ ಉಳಿದಿವೆ. ಎರಡು ಹಂತಗಳಲ್ಲಿ ವಿಂಗಡಿಸಿದ್ದು, ಶೀಘದಲ್ಲೇ ಬಾಕಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದಾಗಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ನೆಹರು ಓಲೇಕಾರ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಹಿಂದೆ ಎರಡು ಅವಧಿಯಲ್ಲಿ ಪರಿಣಾಮಕಾರಿಯಾಗಿ ಆಯೋಗದ ಆಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಚುನಾವಣೆಯ ನೀತಿಸಂಹಿತೆ ಮುಗಿದ ನಂತರ ಜಿಲ್ಲಾಮಟ್ಟದಲ್ಲಿ ಪ್ರವಾಸ ಹಮ್ಮಿಕೊಂಡು ಎಸ್ಸಿ, ಎಸ್ಟಿ ಸಮುದಾಯದವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
‘ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಸಿಗಬೇಕಿತ್ತು. ಮುಖ್ಯಮಂತ್ರಿ ಹಾಗೂ ಸರ್ಕಾರದ ಮೇಲಿರುವ ಸಚಿವ ಆಕಾಂಕ್ಷಿಗಳ ಒತ್ತಡವನ್ನು ಅರಿತು ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ಆಯೋಗವನ್ನು ಒಪ್ಪಿ ಅಧಿಕಾರ ಸ್ವೀಕಾರ ಮಾಡಿದ್ದೇನೆ’ ಎಂದರು.
ಬಿಜೆಪಿ ಜಯಭೇರಿ:
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಈಗಾಗಲೇ ಗುತ್ತಲ ಮತ್ತು ಹೊಸರಿತ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.