ಶನಿವಾರ, ಮಾರ್ಚ್ 25, 2023
28 °C

ಸಾಲದ ಹೆಸರಲ್ಲಿ ₹3.56 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಬಜಾಜ್‌ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಎಂದು ಪರಿಚಯ ಮಾಡಿಕೊಂಡ ದುಷ್ಕರ್ಮಿಗಳು, ₹2 ಲಕ್ಷ ಸಾಲ ಕೊಡಿಸುತ್ತೇವೆ ಎಂದು ನಂಬಿಸಿ, ವ್ಯಕ್ತಿಯೊಬ್ಬರಿಗೆ ₹3.56 ಲಕ್ಷ ವಂಚಿಸಿರುವ ಘಟನೆ ನಡೆದಿದೆ. 

ಸವಣೂರ ತಾಲ್ಲೂಕು ಯಲವಿಗಿ ಗ್ರಾಮದ ಔಷಧ ವ್ಯಾಪಾರಿ ಮಂಜುನಾಥ ತುರಾಯದ ಹಣ ಕಳೆದುಕೊಂಡವರು. ಇವರ ಮೊಬೈಲ್‌ ಸಂಖ್ಯೆಗೆ ಕರೆ ಹಾಗೂ ಮೆಸೇಜ್‌ ಕಳುಹಿಸಿದ ಆರೋಪಿಗಳು ಸಾಲ ಮಂಜೂರು ಮಾಡಿಸಿಕೊಡುತ್ತೇವೆ ಎಂದು ನಂಬಿಸಿದ್ದಾರೆ.

ನಂತರ ಸಾಲದ ಹಣವನ್ನು ಮಂಜುನಾಥ ಅವರ ಖಾತೆಗೆ ವರ್ಗಾವಣೆ ಮಾಡಲು ಪ್ರೊಸೆಸಿಂಗ್‌ ಶುಲ್ಕ ಸೇರಿದಂತೆ ವಿವಿಧ ಶುಲ್ಕಗಳನ್ನು ಭರಿಸಬೇಕು ಎಂದು ಹೇಳಿ, ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 

ನಗರದ ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು