ಸಕಾಲಕ್ಕೆ ಪಠ್ಯಪುಸ್ತಕ ಒದಗಿಸಲು ಒತ್ತಾಯ
‘ಶಾಲೆಯು ಪ್ರಾರಂಭವಾಗುತ್ತಲೆ ವಿದ್ಯಾರ್ಥಿಗಳಿಗೆ ಸರ್ಕಾರ ಪಠ್ಯಪುಸ್ತಕಗಳನ್ನು ಸಕಾಲದಲ್ಲಿ ಒದಗಿಸಬೇಕು. ಇದರೊಂದಿಗೆ ಶಾಲಾ ಸಮವಸ್ತ್ರ ಶ್ಯೂ ಸಾಕ್ಸ್ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನೇಮಕವಾಗಬೇಕು. ಇದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಹಾಯವಾಗುತ್ತದೆ’ ಎನ್ನುತ್ತಾರೆ ರಟ್ಟೀಹಳ್ಳಿ ಗಂಡು ಮಕ್ಕಳ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯ ಅಂಗಡಿ.