ಶನಿವಾರ, ಮೇ 21, 2022
25 °C

ಸಿಡಿಲು ಬಡಿದು ಬಾಲಕ ಸಾವು: ₹5 ಲಕ್ಷ ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಂದಾಪುರ (ಹಾವೇರಿ): ಶಿಗ್ಗಾವಿ ತಾಲ್ಲೂಕಿನ ಚಂದಾಪುರ ಗ್ರಾಮದಲ್ಲಿ ಸಿಡಿಲು ಬಡಿದು 16 ವರ್ಷದ ಬಾಲಕ ಮಹಾಂತೇಶ ರಾಮಣ್ಣ ಜಟ್ಟಪ್ಪನವರ ಮೃತಪಟ್ಟ ಅಹಿತಕರ ಘಟನೆ ಗುರುವಾರ ಸಂಭವಿಸಿತ್ತು.

ಈ ಘಟನೆಯ ಸುದ್ದಿ ತಿಳಿದ್ದ ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ದೆಹಲಿ ಪ್ರವಾಸದಿಂದ ಹುಬ್ಬಳ್ಳಿಗೆ ಆಗಮಿಸಿ, ನೇರವಾಗಿ ಮೃತರ ಮನೆಗೆ ಭೇಟಿ ನೀಡಿ, ಈ ಅಹಿತಕರ ಘಟನೆ ಸಂಭವಿಸಿದ 24 ಗಂಟೆಗಳ ಒಳಗಾಗಿ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ಧನದ ಚೆಕ್ ಅನ್ನು ವಿತರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಿಎಂ ಸಾಂತ್ವನ: ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತ ವಿದ್ಯಾರ್ಥಿಯ ಪಾಲಕರಿಗೆ ಕರೆ ಮಾಡಿ ಸಾಂತ್ವನ ಹೇಳಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸ್ಥಳೀಯ ಪ್ರಮುಖರು ಕಾರ್ಯಕರ್ತರು ಇದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು