ಭಾನುವಾರ, ಆಗಸ್ಟ್ 1, 2021
27 °C

ಐದು ಮುಶ್ಯಾಗಳನ್ನು ಕೊಂದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ವಿನಾಶದ ಅಂಚಿನಲ್ಲಿರುವ ಮುಶ್ಯಾಗಳನ್ನು (ಮಂಗ) ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಹಾನಗಲ್‌ ತಾಲ್ಲೂಕಿನ ತಿಳವಳ್ಳಿ ಗ್ರಾಮದ ಬಳಿ ನಡೆದಿದೆ. 

ಬಲೆ ಹಾಕಿ ಐದು ಮುಶ್ಯಾಗಳನ್ನು ಸೆರೆಹಿಡಿದ ದುಷ್ಕರ್ಮಿಗಳು, ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾರೆ. ಈ ವೇಳೆ ಜನರನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಘಟನಾ ಸ್ಥಳದಲ್ಲಿ ನಾಲ್ಕು ಜರ್ಕಿನ್, ಬೈಕ್‍ ಚಾವಿ ಪತ್ತೆಯಾಗಿದ್ದು, ಬೇಟೆಗಾರರು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮುಶ್ಯಾಗಳ ಮಾಂಸ ಭಕ್ಷಿಸುವ ಕೆಲವರು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಈ ಹಿಂದೆಯೂ ಇಂಥ ಘಟನೆಗಳು ಬೆಳಕಿಗೆ ಬಂದಿದ್ದವು. 

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಮುಶ್ಯಾಗಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.