ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ- ಬೊಮ್ಮಾಯಿ ಸ್ವಾಗತ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತ
Last Updated 1 ಫೆಬ್ರುವರಿ 2023, 14:43 IST
ಅಕ್ಷರ ಗಾತ್ರ

ಹಾವೇರಿ: ‘ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಘೋಷಣೆ ಮಾಡಿದ್ದಾರೆ. ಮಧ್ಯ ಕರ್ನಾಟಕದ ಒಂದು ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಮತ್ತು ಕುಡಿಯುವ ನೀರಿನ ಮಹತ್ವದ ಯೋಜನೆಗೆ ಬಹಳ ಅನುಕೂಲವಾಗಲಿದೆ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮದಲ್ಲಿ ಮುಕ್ತೇಶ್ವರ ದೇವಸ್ಥಾನ ಉದ್ಘಾಟನೆಗೂ ಮುನ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದರು.

ಆದೇಶ ವಾಪಸ್‌

ಬ್ಯಾಡಗಿಯಲ್ಲಿ ಕೈಗಾರಿಕಾ ಕಾರಿಡಾರ್ ಭೂಸ್ವಾಧೀನಕ್ಕೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಫಲವತ್ತಾದ ಭೂಮಿ ಇರುವ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತದೆಯೋ ಅದನ್ನು ತೆಗೆದುಕೊಳ್ಳದೆ, ಬಂಜರು ಭೂಮಿಯಲ್ಲಿ ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್‌ಗೆ ಭೂಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ ಎಂದರು.

ಸಿದ್ದರಾಮಯ್ಯಗೆ ತಿರುಗೇಟು:

ಐದು ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರ ಹಾವೇರಿ ಜಿಲ್ಲೆಗೆ ₹271 ಕೋಟಿ ಅನುಮೋದನೆ ನೀಡಿತ್ತು. ಸುಮಾರು ₹200 ಕೋಟಿಯನ್ನು ಬಿಡುಗಡೆಯನ್ನೇ ಮಾಡಲಿಲ್ಲ. ನಮ್ಮ ಬಿಜೆಪಿ ಸರ್ಕಾರ 4 ವರ್ಷಗಳಲ್ಲಿ ಹಾವೇರಿ ಜಿಲ್ಲೆಗೆ ₹1614 ಕೋಟಿಯನ್ನು ನೀರಾವರಿ ಯೋಜನೆಗಳಿಗಾಗಿಯೇ ಕೊಟ್ಟಿದ್ದೇವೆ. ಇದೆಲ್ಲವೂ ಸಾಧನೆಯಲ್ಲವೇನು ಎಂದು ಸಿಎಂ ಹೇಳುವ ಮೂಲಕ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT