ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಜವಳದ ಊಟ ಸೇವಿಸಿ 87 ಮಂದಿ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರೇಕೆರೂರು: ತಾಲ್ಲೂಕಿನ ವೀರಾಪುರ ಗ್ರಾಮದ ಮನೆಯೊಂದರಲ್ಲಿ ನಡೆದ ಜವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ 87 ಜನ ಅಸ್ವಸ್ಥಗೊಂಡ ಘಟನೆ ಶುಕ್ರವಾರ ನಡೆದಿದೆ.

ಆಹಾರ ಸೇವಿಸಿದವರ ಪೈಕಿ ಅಸ್ವಸ್ಥಗೊಂಡವರಲ್ಲಿ 53 ಜನರು ಚೇತರಿಸಿಕೊಂಡಿದ್ದಾರೆ. 26 ಜನರನ್ನು ಮಾಸೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 7 ಜನರನ್ನು ಹಿರೇಕೆರೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಝಡ್.ಆರ್.ಮಕಾನದಾರ್‌ ತಿಳಿಸಿದ್ದಾರೆ.

ಸಚಿವ ಭೇಟಿ: ಕೃಷಿ ಸಚಿವ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ಶನಿವಾರ ಮಾಸೂರು ಗ್ರಾಮದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.