ರಾಣೆಬೆನ್ನೂರು: ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದು ಸಮಾಜ ಸೇವೆಯಲ್ಲಿ ಸಕ್ರೀಯರಾಗಿದ್ದರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದ ಹಳೇ ಪಿ.ಬಿ. ರಸ್ತೆಯ ಸಾಲೇಶ್ವರ ಸಮುದಾಯ ಭವನದಲ್ಲಿ ಈಚೆಗೆ ನಡೆದ ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೊಡ್ಡಪೇಟೆಯ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಅಪ್ಪಣ್ಣನವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ್ದರು. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುವುದಕ್ಕೆ ಹಡಪದ ಆಪ್ಪಣ್ಣನವರು ಒಂದು ಉತ್ತಮ ಉದಾಹರಣೆಯಾಗಿದ್ದಾರೆ ಎಂದರು.

ಇವರ ಜೀವನದ ಬಗ್ಗೆ ಇನ್ನೂ ಹೆಚ್ಚಿನ ಸಂಶೋದನೆಯಾಗಬೇಕಾಗಿದೆ. ಇಂತಹ ಮೇರು ವ್ಯಕ್ತಿತ್ವ ಹೊಂದಿದ್ದ ಅಪ್ಪಣ್ಣನವರ ಆದರ್ಶಗಳನ್ನು ಸಮಾಜ ಭಾಂದವರು ಜೀವನದಲ್ಲಿ ರೂಢಿಸಿಕೊಂಡು, ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡ ಶಿವಣ್ಣನವರ ಮಾತನಾಡಿದರು.

ಹಡಪದ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಷಣ್ಮುಖಪ್ಪ ಕಾಯಕದ, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಮೈಲಾರ, ಗೌರವ ಅಧ್ಯಕ್ಷ ಶಿವಯೋಗಿ ಹೊಸರಿತ್ತಿ, ನಗರಸಭೆ ಸದಸ್ಯ ಪ್ರಕಾಶ ಪೂಜಾರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ ಹಾವನೂರ, ತಿರಕಪ್ಪ ಹಡಪದ, ಶಶಿಧರ ಕಾಟೇನಹಳ್ಳಿ, ಅಣ್ಣಪ್ಪ ಕ್ಷೌರದ, ನಾಗರಾಜ್ ಬೆಣ್ಣಿ, ಪ್ರಕಾಶ ಹಡಪದ, ಪ್ರಕಾಶ ಕಾಟೇನಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.