ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಡಗಿ | ಬಾಲಕಿ ಸಾವು: ಡೆಂಗಿ ಶಂಕೆ

Published 7 ಜುಲೈ 2024, 11:34 IST
Last Updated 7 ಜುಲೈ 2024, 11:34 IST
ಅಕ್ಷರ ಗಾತ್ರ

ಬ್ಯಾಡಗಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಮಾಸಣಗಿ ಗ್ರಾಮದ ದೀಕ್ಷಾ ದ್ಯಾಮಪ್ಪ ಬನ್ನಿಹಟ್ಟಿ (9) ಎಂಬಾಕೆ ಮಣಿಪಾಲ ಆಸ್ಪತ್ರೆಯಲ್ಲಿ ತೀರಿಕೊಂಡಿದ್ದು, ಡೆಂಗಿ ಶಂಕೆ ವ್ಯಕ್ತವಾಗಿದೆ.

‘ತೀವ್ರ ಜ್ವರದಿಂದ ಬಳಲುತ್ತಿದ್ದ ದೀಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಚಿಕಿತ್ಸೆಗೆ ಸ್ಪಂದಿಸದೇ ಆಕೆ ಅಸುನೀಗಿದ್ದಾಳೆ’ ಎಂದು ಪೋಷಕರು ತಿಳಿಸಿದ್ದಾರೆ.

’ಜೂನ್ 24ರಂದು ಹಾವೇರಿಯ ಖಾಸಗಿ ಆಸ್ಪತ್ರೆಯಲ್ಲಿ ದೀಕ್ಷಾಳನ್ನು ದಾಖಲಿಸಲಾಗಿತ್ತು. ಅಲ್ಲಿಯ ವೈದ್ಯರು, ಡೆಂಗಿ ಶಂಕೆ ವ್ಯಕ್ತಪಡಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದಾಗಿ ಹೇಳಿದ್ದರು. ನಂತರವೇ ದೀಕ್ಷಾಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಅವರು ಹೇಳಿದ್ದಾರೆ.

ಡೆಂಗಿ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT