ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ | ಬತ್ತಿದ ಕೆರೆ; ಕುಡಿಯುವ ನೀರಿಗಾಗಿ ತತ್ವಾರ

Published 3 ಜೂನ್ 2023, 12:14 IST
Last Updated 3 ಜೂನ್ 2023, 12:14 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಅರೆಮಲೆನಾಡು ಭಾಗದ ಸೂಡಂಬಿ, ಹಿರೇಅಣಜಿ ಹಾಗೂ ಚಿಕ್ಕ ಅಣಜಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.

ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಕೃಷಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸೂಡಂಬಿ ಗ್ರಾಮದಲ್ಲಿ 4, ಹಿರೇ ಅಣಜಿ ಗ್ರಾಮದಲ್ಲಿ 3 ಕೊಳವೆ ಬಾವಿಗಳನ್ನು ಕೊರೆಸಿದೆ. ಆದರೆ, ತಲಾ ಒಂದರಲ್ಲಿ ಮಾತ್ರ ನೀರು ದೊರೆತಿದೆ. ಕೆರೆಗಳು ಬತ್ತಿದ್ದು, ರೈತರ ಕೊಳವೆ ಬಾವಿಗಳನ್ನು ಎರವಲು ಪಡೆದು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗಿದೆ ಎಂದು ಎಇಇ ಸುರೇಶ ಬೇಡರ ತಿಳಿಸಿದರು.

ಅರೆ ಮಲೆನಾಡು ಪ್ರದೇಶವಾದರೂ ಕುಡಿಯುವ ನೀರಿಗಾಗಿ ತೀವ್ರ ತೊಂದರೆಯಾಗಿದೆ. ಪ್ರಸಕ್ತ ಕಬ್ಬಿನ ಬೆಳೆಯ ಇಳುವರಿಯೂ ಕಡಿಮೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಹೆಚ್ಚು ಕೊಳವೆ ಬಾವಿ ಕೊರೆದ ಪರಿಣಾಮ ಅಂತರ್ಜಲ ಕುಸಿಯಲು ಕಾರಣವಾಗಿದೆ ಎನ್ನುವುದು ತಜ್ಣರ ಅಭಿಪ್ರಾಯವಾಗಿದೆ.

ಈ ಹಿಂದಿನ ಬಿಜೆಪಿ ಸರ್ಕಾರವು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆ ಕೈಗೊಂಡರೂ, ನದಿ ನೀರು ಮಾತ್ರ ಕೆರೆ ಸೇರಲೇ ಇಲ್ಲ. ಹೀಗಾಗಿ ಈ ಭಾಗದಲ್ಲಿ ತೀವ್ರ ಅನಾವೃಷ್ಠಿ ಎದುರಿಸುವಂತಾಗಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT