ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಹರಿದು ಯುವಕ ಸಾವು

Published 30 ಮೇ 2023, 6:14 IST
Last Updated 30 ಮೇ 2023, 6:14 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ
ಹಾನಗಲ್: ಇಲ್ಲಿನ ಮುಖ್ಯರಸ್ತೆಯ ಕಲ್ಲಬಾವಿ ಕ್ರಾಸ್‌ನಲ್ಲಿ ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ  ಭಾನುವಾರ ಸಂಜೆ ನಡೆದಿದೆ.

ದ್ವಿಚಕ್ರ ವಾಹನ ಸವಾರ ರಾಣೆಬೆನ್ನೂರ ತಾಲ್ಲೂಕಿನ ಹೀಲದಹಳ್ಳಿ ಗ್ರಾಮದ ಭರತ ಹನುಮಂತಪ್ಪ ಚನ್ನಪ್ಪನವರ (19) ಮೃತರು. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದುರಸ್ತಿಗೆ ಆಗ್ರಹ: ಪಟ್ಟಣದ ಮುಖ್ಯ ರಸ್ತೆ ಹದಗೆಟ್ಟಿದ್ದು, ನಿತ್ಯ ಸಣ್ಣಪುಟ್ಟ ಅಪಘಾತಗಳು ಇಲ್ಲಿ ಸಂಭವಿಸುತ್ತಿವೆ. ಭಾನುವಾರ ನಡೆದ ಅಪಘಾತದ ಪ್ರಕರಣದಿಂದ ಎಚ್ಚೆತ್ತಿರುವ ಪಟ್ಟಣ ನಿವಾಸಿಗಳು ರಸ್ತೆ
ಸುಧಾರಣೆಗಾಗಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ.

ಪಟ್ಟಣದ ಸಾರ್ವಜನಿಕರು, ವರ್ತಕರು ಮತ್ತು ವಿವಿಧ ಸಂಘಟನೆಗಳ ಸಭೆ ಕರೆದು ಹಾನಗಲ್ ನಗರಾಭಿವೃದ್ಧಿ ಹಿತರಕ್ಷಣಾ ವೇದಿಕೆ ಹೆಸರಿನಲ್ಲಿ ಪ್ರತಿಭಟನೆಯ ರೂಪರೇಷ ಸಿದ್ಧಪಡಿಸಲು ಸಭೆ ಆಯೋಜಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT