ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ಪಾಸ್‌ ವಿತರಿಸಲು ಎಬಿವಿಪಿ ಆಗ್ರಹ

Last Updated 28 ಸೆಪ್ಟೆಂಬರ್ 2021, 16:25 IST
ಅಕ್ಷರ ಗಾತ್ರ

ಹಾವೇರಿ: ಸೆ.25ರವರೆಗೆ ನೀಡಿದ್ದ ಬಸ್‌ಪಾಸ್‌ಗಳ ಗಡುವು ಮುಗಿದಿದೆ. ಆದ್ದರಿಂದ ಪಿಯು ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಲು ಹೊಸ ಬಸ್‌ಪಾಸ್‌ ಕೂಡಲೇ ವಿತರಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕೇಂದ್ರೀಯ ಬಸ್‌ ನಿಲ್ದಾಣದ ಆವರಣದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ, ದಿಢೀರ್‌ ಪ್ರತಿಭಟನೆ ನಡೆಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಗಂಗಾಧರ ಕುಲಕರ್ಣಿ ಮಾತನಾಡಿ, ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್‌ ಪಾಸ್‌ ದೊರೆಯದ ಕಾರಣ ಅನೇಕ ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಕೆಲವರು ನಿತ್ಯ ನಿಗದಿತ ಬಸ್‌ ಟಿಕೆಟ್‌ ಖರೀದಿಸಿ, ಪ್ರಯಾಣ ಮಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಅಧಿಕಾರಿಗಳು ಬಸ್‌ ಪಾಸ್‌ ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನೊಂದು ವಾರದಲ್ಲಿ ಬಸ್‌ ಪಾಸ್‌ ವಿತರಿಸಲು ಕ್ರಮ ಕೈಗೊಳ್ಳದಿದ್ದರೆ, ಎಬಿವಿಪಿ ವತಿಯಿಂದ ಬೃಹತ್‌ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕು ಸಂಚಾಲಕ ವಿಶ್ವನಾಥ್, ಲಿಂಗರಾಜ, ಕರಿಬಸವಯ್ಯ, ವರುಣ ಹಾಗೂ ಇತರ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT