ರಾಣೆಬೆನ್ನೂರು: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಎಬಿವಿಪಿ ವಿದ್ಯಾರ್ಥಿಗಳು ಗುರುವಾರ ಕೆಲ ಕಾಲ ರಸ್ತೆ ಬಂದ್ ಮಾಡಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯ ಸಹ ಕಾರ್ಯದರ್ಶಿ ಅಭಿಷೇಕ ದೊಡ್ಡಮನಿ ಮಾತನಾಡಿ, ‘ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ’ ಎಂದರು.

‘ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ’ ಎಂದು ದೂರಿದರು.

‘ಕೇಂದ್ರ ಸರ್ಕಾರ ಉಗ್ರದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ನವೀನ ಜಿ.ಕೆ, ನಗರ ಸಹ ಕಾರ್ಯದರ್ಶಿ ಎಲ್ಲಮ್ಮ ಆರ್. ಎಂ., ಶೃತಿ ಆರ್. ಎಂ., ಆಕಾಶ ಹುಲ್ಲತ್ತಿ, ಭರತಕುಮಾರ, ವೈಷ್ಣವಿ, ಧನುಷ, ಪುನೀತ್, ಆದಿತ್ಯ ಇದ್ದರು.

ಪೊಲೀಸರು– ವಿದ್ಯಾರ್ಥಿಗಳ ನಡುವೆ ವಾಗ್ವಾದ

ಕಾಶ್ಮೀರದ ಘಟನೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾಗ ನಗರ ಠಾಣೆ ಸಿಪಿಐ ಶಂಕರ್ ಅವರು ಪ್ರತಿಭಟನೆ ನಿರತ ವಿದ್ಯಾರ್ಥಿಗಳನ್ನು ಭಯಪಡಿಸಿ ಎಳೆದಾಡಿಗ ಘಟನೆ ನಡೆಯಿತು. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ಏರ್ಪಟ್ಟಿತು. ‘ಎಲ್ಲ ವಿದ್ಯಾರ್ಥಿನಿಯರಿಗೂ ಮತ್ತು ಕಾಲೇಜು ಪ್ರಾಚಾರ್ಯರಿಗೆ ನೋಟಿಸ್ ನೀಡಿ ಎಂದು ಭಯಪಡಿಸಿದ್ದಕ್ಕೆ ವಿದ್ಯಾರ್ಥಿಗಳ ಹಕ್ಕನ್ನು ಹತ್ತಿಕ್ಕಲು ಪ್ರಯತ್ನಿಸಿದ ಸಿಪಿಐ ಶಂಕರ್ ಅವರನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ವಿದ್ಯಾರ್ಥಿ ಚಳವಳಿ ಹಮ್ಮಿಕೊಳ್ಳಲಾಗುವುದು’ ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.