ಶನಿವಾರ, ನವೆಂಬರ್ 28, 2020
22 °C
ಶಿಗ್ಗಾವಿಯಲ್ಲಿ ಮಧ್ಯಾಹ್ನ 12ಕ್ಕೆ ಅಂತ್ಯಕ್ರಿಯೆ

ಅಪಘಾತ: ಪ್ಲೈಟ್ ಲೆಫ್ಟಿನೆಂಟ್ ಜಗದೀಶ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗದೀಶ ಸುತಗಟ್ಟಿ

ಶಿಗ್ಗಾವಿ: ಅಸ್ಸಾಂನ ಜೋಹ್ರತ್‌ನಲ್ಲಿ ವಾಯುಪಡೆಯ ಪ್ಲೈಟ್ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಪಟ್ಟಣದ ಹೌಸಿಂಗ್ ಬೋರ್ಡ್ ನಿವಾಸಿ ಜಗದೀಶ ಸುತಗಟ್ಟಿ (29) ಅವರು ಗುರುವಾರ ಬೆಳಿಗ್ಗೆ 5 ಗಂಟೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಪಘಾತ ಎಲ್ಲಿ ಸಂಭವಿಸಿದೆ? ಹೇಗೆ ಸಂಭವಿಸಿದೆ ಎಂಬ ಮಾಹಿತಿ ಇಲ್ಲ. ಅಧಿಕಾರಿಗಳು ಅಪಘಾತದಿಂದ ನಿಮ್ಮ ಮಗ ಮೃತಪಟ್ಟಿದ್ದಾರೆ ಎಂದಷ್ಟೇ ತಿಳಿಸಿದ್ದಾರೆ. ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರು ಮಾರ್ಗವಾಗಿ ಶನಿವಾರ ನಾಳೆ ಬೆಳಗ್ಗೆ 6ಕ್ಕೆ ಶಿಗ್ಗಾವಿ ಪಟ್ಟಣ ತಲುಪಲಿದೆ. ಮಧ್ಯಾಹ್ನ 12ಕ್ಕೆ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

1992ರಲ್ಲಿ ಜನಿಸಿದ್ದ ಜಗದೀಶ ಅವರು, ಶಿಗ್ಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ಮುಗಿಸಿದ್ದರು. ಬಳಿಕ ದಾವಣಗೆರೆಯ ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದರು.

2017ರಲ್ಲಿ ವಾಯುಪಡೆಯ 10, ವಿಂಗ್ ಏರ್ ಫೋರ್ಸ್ ವಿಭಾಗದಲ್ಲಿ ಪ್ಲೈಟ್ ಲೆಫ್ಟಿನೆಂಟ್ ಆಗಿ ನೇಮಕಗೊಂಡು ಜೋಹ್ರತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ಎರಡು ವರ್ಷ ಹತ್ತು ತಿಂಗಳು ಸೇವೆ ಸಲ್ಲಿಸಿದ್ದರು. ಜಗದೀಶ ಅವರಿಗೆ ತಂದೆ, ತಾಯಿ, ಅಜ್ಜ ಹಾಗೂ ಸೋದರ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು