ಮಂಗಳವಾರ, ಸೆಪ್ಟೆಂಬರ್ 21, 2021
22 °C

ಬೈಕ್‌ಗೆ ಬಸ್‌ ಡಿಕ್ಕಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾನಗಲ್: ಹಾನಗಲ್- ಬಂಕಾಪೂರ ರಸ್ತೆಯ ತಾಲ್ಲೂಕಿನ ಹುಣಸಿಕಟ್ಟಿ ಕ್ರಾಸ್ (ಗುಂಡೂರ) ಬಳಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಬೆಳಗಾಲಪೇಟೆ ಗ್ರಾಮದ ಚೇತನ ಈಳಿಗೇರ (32) ಮತ್ತು ಸುರೇಶ ಚಕ್ರಸಾಲಿ (33) ಮೃತಪಟ್ಟವರು. ಇವರು ಹಾನಗಲ್‌ನಿಂದ ಬೆಳಗಾಲಪೇಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಹಾನಗಲ್ ಸಾರಿಗೆ ಘಟಕಕ್ಕೆ ಸೇರಿದ ಬಸ್ ಗೋಕಾಕನಿಂದ ಹಾನಗಲ್‌ಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.